Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಡಿದ ಶಾಸಕರಿಂದ ಆರೋಪಗಳ ಸುರಿಮಳೆ : ಸಿಎಂ ಮುಂದೆ ಹೇಳಿದ್ದೇನು ರಾಜು ಕಾಗೆ, ಬಿಆರ್ ಪಾಟೀಲ್..?

---Advertisement---

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನೇರವಾಗಿಯೇ ಆಕ್ರೋಶ ಹೊರ ಹಾಕುತ್ತಿರುವ ಬೆಳವಣಿಗೆ ನಡೆಯುತ್ತಿದೆ. ಶಾಸಕ ರಾಜು ಕಾಗೆ ನಾನು ಈಗಲೇ ರಾಜೀ‌ನಾಮೆ ಕೊಡ್ತೀನಿ ಅಂದ್ರೆ ಬಿಆರ್ ಪಾಟೀಲ್, ವಸತಿ ಇಲಾಖೆಯಲ್ಲಿ ನಾನು ಪತ್ರ ಬರೆದರು ಅದಕ್ಕೆ ಬೆಲೆ ಇಲ್ಲ ಅಂತಿದ್ದಾರೆ. ಈ ಬೆಳವಣಿಗೆಯಿಂದ, ನೇರಾ ನೇರಾ ಆರೋಪದಿಂದ ಸಹಜವಾಗಿಯೇ ಸರ್ಕಾರಕ್ಕೆ ಮುಖಭಂಗವಾಗಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಇಬ್ಬರು ಶಾಸಕರನ್ನು ಕರೆಸಿ ಮಾತುಕತೆ ನಡೆಸಿದ್ದಾರೆ.

ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಮೀಟಿಂಗ್ ಮಾಡಿದ್ದು, ಆಳಂದ ಶಾಸಕ ಬಿಆರ್ ಪಾಟೀಲ್, ಕಾಗವಾಡ ಶಾಸಕ ರಾಜು ಕಾಗೆ ಅವರ ಜೊತೆಗೆ ಒಂದು ಮೀಟಿಂಗ್ ಮಾಡಿದ್ದಾರೆ. ಈ ವೇಳೆ ಇಬ್ಬರು ಶಾಸಕರು ಸಿಎಂ ಸಿದ್ದರಾಮಯ್ಯ ಬಳಿ ಸಾಲು ಸಾಲು ದೂರುಗಳನ್ನು ನೀಡಿದ್ದಾರೆ. ಸಚಿವರ ಕಾರ್ಯವೈಖರಿ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ. ಬಳಿಕ ಸಿಎಂ ಸಿದ್ದರಾಮಯ್ಯ ಅವರು ಇಬ್ಬರು ಶಾಸಕರಿಗೂ ಸಮಾಧಾನ ಮಾಡಿದ್ದಾರೆ ಎನ್ನಲಾಗಿದೆ. ಸಿಎಂ ಎದುರು ತಮ್ಮ ತಮ್ಮ ಕ್ಷೇತ್ರದ ಸಮಸ್ಯೆ ಬಗ್ಗೆ ತಮ್ಮ ಸಮಸ್ಯೆ ಮುಂದಿಟ್ಟಿದ್ದಾರ.

ಇಬ್ಬರ ಸಮಸ್ಯೆಯನ್ನು ಆಲಿಸಿದ ಸಿಎಂ ಸಿದ್ದರಾಮಯ್ಯ ಅವರು, ಇಬ್ಬರಿಗೂ ಭರವಸೆಯನ್ನ ನೀಡಿ ಕಳುಹಿಸಿದ್ದಾರೆ ಎನ್ನಲಾಗಿದೆ. ಶಾಸಕರಿಗೆ ಮೊದಲ ಆದ್ಯತೆ ನೀಡುವಂತೆ ಹೇಳುತ್ತೇನೆ. ಆದರೆ ಯಾವುದೇ ಕಾರಣಕ್ಕೂ ಬಹಿರಂಗವಾಗಿ ಮಾತನಾಡಬೇಡಿ. ಎಲ್ಕಾ‌ಸರಿ ಹೋಗುತ್ತಿದೆ. ಸರಿ ಮಾಡಿಕೊಂಡು ಹೋಗೋಣಾ. ಏನೇ ಸಮಸ್ಯೆಗಳಿದ್ದರೂ ಮುಂದೆ ಸರಿ ಮಾಡಿಕೊಂಡು ಹೋಗೋಣಾ ಎಂಬ ಆತ್ಮವಿಶ್ವಾಸವನ್ನ ಇಬ್ಬರು ಶಾಸಕರಿಗೆ ತುಂಬಿದ್ದಾರೆ ಎನ್ನಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...