Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಾಹನ ಸವಾರರಿಗೆ ಕೊಂಚ ರಿಲ್ಯಾಕ್ಸ್ : HSRP ಪ್ಲೇಟ್ ಅಳವಡಿಕೆ ಸಮಯ ವಿಸ್ತರಣೆ..!

---Advertisement---

 

 

ವಾಹನ ಸವಾರರು ತಮ್ಮ ತಮ್ಮ ಗಾಡಿಗಳಿಗೆ HSRP ಪ್ಲೇಟ್ ಅಳವಡಿಕೆಗೆ ಮತ್ತಷ್ಟು ಸಮಯವನ್ನು ವಿಸ್ತರಣೆ ಮಾಡಲಾಗಿದೆ. 2019ರ ಏಪ್ರಿಲ್ 1ರ ಮೊದಲು ನೋಂದಾಯಿಸಲ್ಪಟ್ಟ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಲೇಬೇಕಾಗಿದೆ. ಗಾಡಿಗಳಿಗೆ ಅಳವಡಿಕೆ ಮಾಡಿಕೊಳ್ಳುವುದಕ್ಕೆ ಈಗಾಗಲೇ ನಾಲ್ಕು ಬಾರಿ ಗಡುವು ವಿಸ್ತರಣೆ ಮಾಡಲಾಗಿದೆ. ಇದೀಗ 5ನೇ ಬಾರಿಯೂ ವಿಸ್ತರಣೆಯಾಗಿದೆ. ಈ ಮೊದಲು ಸೆಪ್ಟೆಂಬರ್18ರವರೆಗೂ ನಂಬರ್ ಪ್ಲೇಟ್ ಅಳವಡಿಕೆಗೆ ಸಮಯ ನಿಗಧಿ ಮಾಡಲಾಗಿತ್ತು. ಇದೀಗ ಎರಡು ತಿಂಗಳವರೆಗೂ ಅವಧಿ ವಿಸ್ತರಿಸಲಾಗಿದೆ.

ಈ ಸಂಬಂಧ ಹೈಕೋರ್ಟ್ ನಲ್ಲಿ ವಿಚಾರಣೆ ನಡೆದಿದೆ. ವಕೀಲ ದೇವದತ್ ಕಾಮತ್ ಅವರು ಸಮಯಾವಕಾಶ ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಇಂದು ನಡೆದ ವಿಚಾರಣೆಯಲ್ಲಿ ವಕೀಲರ ಮನವಿಯನ್ನು ಕೋರ್ಟ್ ಪುರಸ್ಕರಿಸಿದೆ. ನವೆಂಬರೆ 20ರವರೆಗೂ ನಂಬರ್ ಪ್ಲೇಟ್ ಅಳವಡಿಕೆಗೆ ವಿಸ್ತರಣೆ ಮಾಡಿ, ಅರ್ಜಿ ವಿಚಾರಣೆಯನ್ನು ನವೆಂಬರ್ 20ಕ್ಕೆ‌ ಮುಂದೂಡಿಕೆ ಮಾಡಿದೆ.

ನ್ಯಾಯಮೂರ್ತಿಗಳಾದ ಕೆ.ಕಾಮೇಶ್ವರ ರಾವ್ ಹಾಗೂ ಕೆ ರಾಜೇಶ್ ರೈ ಅವರ ನೇತೃತ್ವದ ವಿಭಾಗೀಯ ಪೀಠದಿಂದ ಈ ಆದೇಶ ನೀಡಲಾಗಿದೆ. ಇನ್ನು ಎರಡು ತಿಂಗಳು ಸಮಯ ಇರುವ ಕಾತಣ ವಾಹನ ಸವಾರರಿಗೆ ರಿಲ್ಯಾಕ್ಸ್ ಸಿಕ್ಕಿದೆ. HSRP ಪ್ಲೇಟ್ ಅಳವಡಿಸುವುದಕ್ಕೆ ಹೀಗೆ ಮಾಡಿ, ಮೊದಲು https://transport.Karnataka.gov.in ಲಾಗಿನ್ ಆಗಿ. book HSRP ಕ್ಲಿಕ್ ಮಾಡಿ. ನಿಮ್ಮ ವಾಹನದ ತಯಾರಕ ಕಂಪನಿ ಹೆಸರು ಹಾಕಿ, ವಾಹನದ ಮಾಹಿತಿಯನ್ನು ನಮೂದಿಸಿ, ಹತ್ತಿರದ ಡೀಲರ್ ಶೋ ರೂಂ ಆಯ್ಕೆ ಮಾಡಿಕೊಳ್ಳಿ. HSRP ಪ್ಲೇಟ್ ಗೆ ಪಾವತಿ ಮಾಡಿ. ಬಳಿಕ ನಿಮ್ಮ ಮೊಬೈಲ್ ನಂಬರಿಗೆ ಒಟಿಪಿ ಬರುತ್ತೆ, ನಿಮಗೆ ಯಾವ ದಿನ ಅನುಕೂಲವಿದೆಯೋ ಆ ದಿನವನ್ನು ಆಯ್ಕೆ ಮಾಡಿಕೊಂಡು ಪ್ಲೇಟ್ ಅಳವಡಿಸಿಕೊಳ್ಳಿ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment