Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಮನಗರದ ವಸತಿ ಶಾಲೆಯಲ್ಲಿ ಗೋಡೆ ಕುಸಿದು ಬಾಲಕ ಸಾವು..!

---Advertisement---

 

 

ರಾಮನಗರ: ಮುಖ ತೊಳೆಯಲು ಹೋದಾಗ ಬಾಲಕನ ಮೇಲೆ ಗೋಡೆ ಕುಸಿದು ಸಾವನ್ನಪ್ಪಿರುವ ಘಟನೆ ಬಿಡದಿ ಹೋಬಳಿಯ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ನಡೆದಿದೆ. 12 ವರ್ಷ್ ಕೌಶಿಕ್ ಮೃತ ದುರ್ದೈವಿ.

ಕೌಶಿಕ್ ಗೌಡ ವಸತಿ ಶಾಲೆಯಲ್ಲಿ ಆರನೇ ತರಗತಿ ಓದುತ್ತಿದ್ದ. ಮುಖ ತೊಳೆಯುವುದಕ್ಕೆಂದು ತೊಟ್ಟಿ ಬಳಿ ಬಂದಿದ್ದಾನೆ. ಆದರೆ‌ ಈ ವೇಳೆ ಗೋಡೆ ಕುಸಿದಿದೆ. ಕೌಶಿಕ್ ತಲೆಗೆ ಜೋರು ಪೆಟ್ಟು ಬಿದ್ದಿದ್ದು, ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ‌ ಅಷ್ಟರಲ್ಲಾಗಲೇ ಕೌಶಿಕ್ ಸಾವನ್ನಪ್ಪಿದ್ದನು. ತೀವ್ರ ರಕ್ತಸ್ರಾವವಾಗಿದ್ದರಿಂದ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.

ಈ ಪ್ರಕರಣದಿಂದ ಇನ್ನಿಬ್ಬರು ಮಕ್ಕಳಿಗೆ ಗಂಭೀರ ಗಾಯವಾಗಿದೆ. ವಸತಿ ಶಾಲೆ ಆಡಳಿತ ಮಂಡಳಿ ನಿರ್ಲಕ್ಷ್ಯಕ್ಕೆ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ದಯಾನಂದ ಸಾಗರ ಆಸ್ಪತ್ರೆಯಲ್ಲಿ ಗಾಯಾಳು ವಿದ್ಯಾರ್ಥಿಗಳಿಗೆ ಚಿಕಿತ್ಸೆ ಮುಂದುವರಿದಿದೆ. ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...