ಯಾದಗಿರಿ: ಮಲ್ಲಿಕಾರ್ಜುನ ಮುತ್ಯಾ ಮತ್ತೆ ಮುನ್ನಲೆಗೆ ಬಂದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಹೆಣ್ಣು ಮಗುವಿನ ಜೊತೆಗೆ ನಡೆದುಕೊಂಡ ರೀತಿಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಸಂಬಂಧ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಫೋಕ್ಸೋ ಕೇಸ್ ಕೂಡ ದಾಖಲಾಗಿದೆ. ಅಪ್ರಾಪ್ತ ಬಾಲಕಿ ಜೊತೆಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಶಹಾಪುರದ ಮಹಲ್ ರೋಜಾ ಗ್ರಾಮದಲ್ಲಿ ದೂರು ದಾಖಲಾಗಿದೆ.
ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸೂಚನೆ ಬೆನ್ನಲ್ಲೇ ಈ ಪ್ರಕರಣ ದಾಖಲಾಗಿದೆ. ಶಹಾಪುರ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ದೂರು ನೀಡಿದ್ದು, ಫೋಕ್ಸೋ ಹಾಗೂ ಬಿಎನ್ಎಫ್ ಕಾಯ್ದೆಯಡಿ ಎಫ್ಐಆರ್ ದಾಖಲಾಗಿದೆ. ಇತ್ತ ಪ್ರಕರಣ ದಾಖಲಾಗುತ್ತಿದ್ದಂತೆ ಮಲ್ಲಿಕಾರ್ಜುನ ಮುತ್ಯ ಪರಾರಿಯಾಗಿದ್ದಾರೆ ಎನ್ನಲಾಗ್ತಾ ಇದೆ. ವಿಡಿಯೋವೊಂದು ವೈರಲ್ ಆಗಿದ್ದು, ಆ ವಿಡಿಯೋ ಆಧಾರದ ಮೇಲೆ ದೂರು ದಾಖಲಾಗಿದೆ. ಉತ್ತರ ಕರ್ನಾಟಕದ ಒಂದಷ್ಟು ಜನರು ಅಪ್ಪಾಜಿ ಎಂದೇ ಪ್ರೀತಿ ತೋರಿಸುತ್ತಾರೆ ಈ ಮುತ್ಯನಿಗೆ. ದೇವರ ಸ್ಥಾನವನ್ನೇ ಕೆಲವರು ನೀಡಿದ್ದಾರೆ.
ಈ ಪ್ರಕರಣವನ್ನ ಮಕ್ಕಳ ರಕ್ಷಣಾ ಆಯೋಗ ಗಂಭೀರವಾಗಿ ತೆಗೆದುಕೊಂಡಿದೆ. ಅಧ್ಯಕ್ಷರಾದ ಶಶಿಧರ್ ಕೋಸುಂಬೆ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಅಪ್ರಾಪ್ತ ಮಗುವಿನೊಂದಿಗೆ ನಡೆದುಕೊಂಡ ರೀತಿಯ ವಿಡಿಯೋ ವೈರಲ್ ಆಗ್ತಾ ಇದೆ. ಈ ಸಂಬಂಧ ಯಾದಗಿರಿ ಎಸ್ಪಿ ಅವರಿಗೆ ಪತ್ರದ ಮೂಲಕ ತಿಳಿಸಿದ್ದೇವೆ. ಕೂಡಲೇ ಪರಿಶೀಲನೆ ಮಾಡಿ ಎಂದಿದ್ದೇವೆ. ರಾತ್ರಿಯೇ ಈ ಸಂಬಂಧ ಎಫ್ಐಆರ್ ಆಗಿದೆ. ಯಾರ್ಯಾರು ಸೋಷಿಯಲ್ ಮೀಡಿಯಾದಲ್ಲಿ ಈ ಸಂಬಂಧ ವಿಡಿಯೋ ಪ್ರಕಟಿಸಿದ್ದಾರೆ ಅವರನ್ನು ಪತ್ತೆ ಹಚ್ಚಿ, ಫೋಕ್ಸೋ ಪ್ರಕರಣದಡಿ ಕೇಸ್ ದಾಖಲಿಸುವುದಕ್ಕೆ ಸೂಚನೆ ಕೊಟ್ಟಿದ್ದೇನೆ ಎಂದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











