ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, (ಮೇ.25) : ಮುರುಘಾಮಠದ ಪರಂಪರೆಯ ಉಳಿವಿಗಾಗಿ ವೀರಶೈವ ಲಿಂಗಾಯಿತ ಯುವ ವೇದಿಕೆ ಹೋರಾಟ ಮಾಡಿಕೊಂಡು ಬರುತ್ತಿದ್ದು, ನೂತನ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ನೇತೃತ್ವದಲ್ಲಿ ಸಭೆ ಕರೆದು ಸಮಿತಿಗಳನ್ನು ರಚಿಸಲಿ ಎಂದು ವೀರಶೈವ ಲಿಂಗಾಯಿತ ಯುವ ವೇದಿಕೆ ಜಿಲ್ಲಾಧ್ಯಕ್ಷ ಹೆಚ್.ಎಂ.ಮಂಜುನಾಥ್ ಮನವಿ ಮಾಡಿದರು.
ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುರುಘಾಮಠದ ಡಾ.ಶಿವಮೂರ್ತಿ ಶರಣರ ಅಧಿಕಾರವಧಿಯನ್ನು ಜಿಲ್ಲಾ ನ್ಯಾಯಲಯ ಮೊಟಕುಗೊಳಿಸಿದ್ದು, ಉಚ್ಚ ನ್ಯಾಯಾಲಯ ಸದರಿ ಪ್ರಕರಣವನ್ನು ವಜಾಗೊಳಿಸಿದೆ. ಮುರುಘಾಮಠಕ್ಕೆ ಸರ್ಕಾರ ನೇಮಕ ಮಾಡಿದ್ದ ಆಡಳಿತಾಧಿಕಾರಿಯನ್ನು ವಜಾ ಮಾಡಿದ್ದು, ವೀರಶೈವ ಸಮಾಜ, ಮಠದ ಭಕ್ತರು ಹಾಗೂ ಇತರೆ ಸಮಾಜದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಾಲ್ಕು ವಾರಗಳಲ್ಲಿ ಆಡಳಿತ ಸಮಿತಿಯನ್ನು ರಚಿಸಿ ನ್ಯಾಯಾಲಯಕ್ಕೆ ವರದಿ ನೀಡಲು ಆದೇಶಿಸಿರುವುದರಿಂದ ಚಿತ್ರದುರ್ಗದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಸಭೆ ಕರೆದು ಸಮಿತಿ ರಚಿಸಲಿ ಎಂದು ಹೆಚ್.ಎಂ.ಮಂಜುನಾಥ್ ವಿನಂತಿಸಿದರು.
ವೀರಶೈವ ಲಿಂಗಾಯಿತ ಯುವ ವೇದಿಕೆ ಗೌರವಾಧ್ಯಕ್ಷ ಕೆ.ಸಿ.ಗಂಗಾಧರ್, ಜಿಲ್ಲಾ ಉಪಾಧ್ಯಕ್ಷ ಗಿರೀಶ್ ಎಂ.ಎಸ್. ಕಾರ್ಯದರ್ಶಿ ಸಿ.ಬಿ.ನಾಗರಾಜ್, ತಾಲ್ಲೂಕು ಅಧ್ಯಕ್ಷ ಪ್ರಶಾಂತ್‍ರೆಡ್ಡಿ ಹೆಚ್. ನಗರಾಧ್ಯಕ್ಷ ಶಿವಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…