ಸುದ್ದಿಒನ್, ಫೆಬ್ರವರಿ.10 : ಚಲಿಸುತ್ತಿದ್ದ ಕಂಟೇನರ್ ಲಾರಿ ಟೈಯರ್ ಬ್ಲಾಸ್ಟ್ ಆಗಿ ಲಾರಿ ಹೊತ್ತಿ ಉರಿದ ಘಟನೆ ತಾಲೂಕಿನ ಜವಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.
ಚಿತ್ರದುರ್ಗ ಕಡೆಯಿಂದ ಬೆಂಗಳೂರು ಕಡೆಗೆ ಹೋಗುವ ಮಾರ್ಗ ಮಧ್ಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಅಂಬುಲೆನ್ಸ್ ಮತ್ತು ಅಗ್ನಿಶಾಮಕ ದಳ ಸಿಬ್ಬಂದಿಗಳು ಭೇಟಿ ನೀಡಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಕಂಟೇನರ್ ಲಾರಿಯಲ್ಲಿ ಚಾಲಕನ ಹೆಸರು, ಎಲ್ಲಿಂದ ಬಂದಿತ್ತು, ಸರಕು ಸಾಗಣೆ ವಸ್ತುಗಳು ಏನಿತ್ತು, ಎಂಬುದರ ಬಗ್ಗೆ ತಿಳಿದು ಬರಬೇಕಿದೆ.
ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















