Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗದ ಖ್ಯಾತ ಹೋಟೆಲ್ ಉದ್ಯಮಿ ಆನಂದ ರಾಮ ಉಳ್ಳೂರು ಇನ್ನಿಲ್ಲ

---Advertisement---

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.02 : ನಗರದ ಜೆಸಿಆರ್ ಬಡಾವಣೆಯ ವಾಸಿ ಹೋಟೆಲ್ ಸಂಘದ ಮಾಜಿ ಅಧ್ಯಕ್ಷ ಆನಂದ ರಾಮ ಉಳ್ಳೂರ್ (85 ವರ್ಷ) ಅವರು ಇಂದು (ಸೋಮವಾರ) ಸಂಜೆ 7:30 ರ ಸುಮಾರಿಗೆ ನಿಧನರಾಗಿದ್ದಾರೆ.

ಪತ್ನಿ,  ಮೂವರು ಹೆಣ್ಣು ಮಕ್ಕಳು,  ಓರ್ವ ಮಗ ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ನಾಳೆ(ಮಂಗಳವಾರ) ಬೆಳಿಗ್ಗೆ 9:30ಕ್ಕೆ ನಗರದ ಜೋಗಿ ಮುಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಗುವುದು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಹೋಟೆಲ್ ಉದ್ಯಮಕ್ಕೆ ಅವರು ಅಪಾರ ಸೇವೆಯನ್ನು ಗುರುತಿಸಿ ರಾಜ್ಯ ಮಟ್ಟದ ಹೋಟೆಲ್ ಮಾಲೀಕರ ಸಂಘ ಕೊಡಮಾಡುವ ಆತಿಥ್ಯ ರತ್ನ ಪ್ರಶಸ್ತಿ ಲಭಿಸಿದೆ. ಚಿತ್ರದುರ್ಗ ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾಗಿ ಮತ್ತು ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅವರಿಗೆ ರಾಜ್ಯಮಟ್ಟ ರಾಜ್ಯಮಟ್ಟದ ವಿಪ್ರಶ್ರೀ ಪ್ರಶಸ್ತಿಯೂ ಲಭಿಸಿದೆ. 

ಇವರ ನಿಧನಕ್ಕೆ ಚಿತ್ರದುರ್ಗ ಹೋಟೆಲ್ ಮಾಲೀಕರ ಸಂಘ, ಚಿತ್ರದುರ್ಗ ಬ್ರಾಹ್ಮಣ ಸಂಘ ಸೇರಿದಂತೆ ವಿವಿಧ ಸಂಘಟನೆಗಳ‌ ಅಧ್ಯಕ್ಷರೂ ನಿರ್ದೇಶಕರು, ಸದಸ್ಯರು ಸೇರಿದಂತೆ ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...