ದರ್ಶನ್ಗೆ ಅಭಿಮಾನಿಗಳ ಸಂಖ್ಯೆ ಕಡಿಮೆ ಏನು ಇಲ್ಲ ಎಂಬುದನ್ನು ಬಿಡಿಸಿ ಹೇಳಬೇಕಾಗಿಲ್ಲ. ಕ್ರಾಂತಿ ಪ್ರಮೋಷನ್ ಗಾಗಿ ಜಿಲ್ಲೆ ಜಿಲ್ಲೆಗೆ ಹೋದಾಗಲೂ ಇದು ಪ್ರೂವ್ ಆಗಿದೆ. ತಮ್ಮ ಡಿ ಬಾಸ್ ನೋಡಲು ಎಲ್ಲೆಲ್ಲಿಂದಾನೋ ಬರುತ್ತಾರೆ. ಡಿ ಬಾಸ್ಗಾಗಿ ಕಾಯುತ್ತಾರೆ. ದರ್ಶನ್ ಸಿನಿಮಾ ಬರುತ್ತಾ ಇದೆ ಅಂದ್ರೆ ಅವರಿಗೆ ಹಬ್ಬವೇ ಸರಿ. ಈ ಹಬ್ಬಕ್ಕಾಗಿ ಕಾಯುತ್ತಿದ್ದ ಅಭಿಮಾನಿಯೊಬ್ಬ ನಿಧನರಾಗಿರುವ ಘಟನೆ ನಡೆದಿದೆ.
ಅಭಿ ಎಂಬ ಯುವಕ ದರ್ಶನ್ ಅವರಿಗೆ ಅಪ್ಪಟ ಅಭಿಮಾನಿಗಿದ್ದರು. ಕ್ರಾಂತಿ ಸಿನಿಮಾದ ಟ್ರೇಲರ್ ನೋಡಿ ಹರ್ಷ ವ್ಯಕ್ತಪಡಿಸಿದ್ದರು. ಸಿನಿಮಾವನ್ನು ನೋಡಬೇಕೆಂದು ಕಾತುರರಾಗಿದ್ದರು. ಡಿ ಬಾಸ್ ಗೋಸ್ಕರ ಒಂದು ಗುಡಿಯನ್ನು ಕಟ್ಟಿಸುತ್ತೇನೆ ಎಂದು ಹೇಳಿದ್ದರು. ಆದರೆ ವಿಧಿ ಅದಕ್ಕೆ ಅವಕಾಶ ನೀಡಿಲ್ಲ. ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಬೈಕ್ ಓಡಿಸುವಾಗ ಅಪಘಾತಕ್ಕೀಡಾಗಿ ಪ್ರಾಣ ಕಳೆದುಕೊಂಡಿದ್ದಾರೆ.
ಅಭಿಮಾನಿಯ ಸಾವಿಗೆ ನಟ ದರ್ಶನ್ ಕಂಬನಿ ಮಿಡಿದಿದ್ದು, ತಮ್ಮ ಸೆಲೆಬ್ರೆಟಿಗಳಿಗೆ ಸಲಹೆಯನ್ನು ನೀಡಿದ್ದಾರೆ. “ಎಲ್ಲರಿಗೂ ಕಳಕಳಿಯ ಮನವಿ. ಗಾಡಿಯಲ್ಲಿ ಚಲಿಸುವಾಗ ದಯಮಾಡಿ ಅತೀ ಜಾಗೃಕತೆಯಿಂದ ಓಡಿಸಿ. ನಿಮ್ಮ ಕುಟುಂಬ ನಿಮ್ಮ ಮೇಲೆ ಅವಲಂಬಿತವಾಗಿರುತ್ತದೆ ಎಂಬುದನ್ನು ಮರೆಯದಿರಿ. ಕೆಲವೊಮ್ಮೆ ನಮ್ಮ ಪ್ರಜ್ಞೆಯಲ್ಲಿದ್ದರೂ ಸಹ ದುರದೃಷ್ಟವಶಾತ್ ಅಪಘಾತಗಳು ಸಂಭವಿಸುತ್ತವೆ.ಅಭಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.” ಎಂದಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…