Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ आध्यात्मिक अन्य

---Advertisement---

ಚಿತ್ರದುರ್ಗದಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ, ವ್ಯಕ್ತಿಗೆ ಚೂರಿ ಇರಿತ…!

---Advertisement---

 

ಸುದ್ದಿಒನ್,  ಚಿತ್ರದುರ್ಗ, ಏಪ್ರಿಲ್. 14  : ಕ್ಷುಲ್ಲಕ ಕಾರಣಕ್ಕೆ ಜಗಳ ಶುರುವಾಗಿ ವ್ಯಕ್ತಿಯೊಬ್ಬರಿಗೆ ಚೂರಿ ಇರಿದ ಘಟನೆ ನಗರದಲ್ಲಿ ಭಾನುವಾರ ನಡೆದಿದೆ.

ಹೊಳಲ್ಕೆರೆ ರಸ್ತೆಯ ಬರಗೇರಿ ಬೀದಿಯಲ್ಲಿ ಈ ಘಟನೆ ನಡೆದಿದೆ. ಮನೆ ಮುಂದೆ ನಾಯಿ ಹೊಲಸು ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕುಟುಂಬಸ್ಥರ ಮೇಲೆ ಹಲ್ಲೆ‌ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ಕೊಟ್ರೇಶಪ್ಪ(46 ವರ್ಷ) ಎಂಬ ವ್ಯಕ್ತಿ ಚೂರಿ ಇರಿತಕ್ಕೆ ಒಳಗಾಗಿದ್ದು, ಗಾಯಾಳುವಿಗೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನವೀನ್ ಎಂಬುವರಿಗೆ ನಾಯಿ ಸೇರಿದ್ದು, ಕೊಟ್ರೇಶಪ್ಪ ಮನೆಯ ಮುಂದೆ ಗಲೀಜು ಮಾಡಿದೆ. ಇದನ್ನು ಕೊಟ್ರೇಶಪ್ಪ ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ತಾರಕಕ್ಕೇರಿದೆ. ನಾಯಿ ಮಾಲೀಕ ನವೀನ್ ಹಾಗೂ ಪತ್ನಿ ತೇಜಸ್ವಿನಿ ಸೇರಿ ಕೊಟ್ರೇಶಪ್ಪ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Join WhatsApp

Join Now

Join Telegram

Join Now

Leave a Comment