ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 14 : ಕ್ಷುಲ್ಲಕ ಕಾರಣಕ್ಕೆ ಜಗಳ ಶುರುವಾಗಿ ವ್ಯಕ್ತಿಯೊಬ್ಬರಿಗೆ ಚೂರಿ ಇರಿದ ಘಟನೆ ನಗರದಲ್ಲಿ ಭಾನುವಾರ ನಡೆದಿದೆ.
ಹೊಳಲ್ಕೆರೆ ರಸ್ತೆಯ ಬರಗೇರಿ ಬೀದಿಯಲ್ಲಿ ಈ ಘಟನೆ ನಡೆದಿದೆ. ಮನೆ ಮುಂದೆ ನಾಯಿ ಹೊಲಸು ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ಕೊಟ್ರೇಶಪ್ಪ(46 ವರ್ಷ) ಎಂಬ ವ್ಯಕ್ತಿ ಚೂರಿ ಇರಿತಕ್ಕೆ ಒಳಗಾಗಿದ್ದು, ಗಾಯಾಳುವಿಗೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನವೀನ್ ಎಂಬುವರಿಗೆ ನಾಯಿ ಸೇರಿದ್ದು, ಕೊಟ್ರೇಶಪ್ಪ ಮನೆಯ ಮುಂದೆ ಗಲೀಜು ಮಾಡಿದೆ. ಇದನ್ನು ಕೊಟ್ರೇಶಪ್ಪ ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ತಾರಕಕ್ಕೇರಿದೆ. ನಾಯಿ ಮಾಲೀಕ ನವೀನ್ ಹಾಗೂ ಪತ್ನಿ ತೇಜಸ್ವಿನಿ ಸೇರಿ ಕೊಟ್ರೇಶಪ್ಪ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.














