Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಒಂದು ಕಡೆ ಉಚಿತ ಕೊಡುಗೆ ! ಇನ್ನೊಂದು ಕಡೆ ಖಚಿತ ಸುಲಿಗೆ : ಕಾಂಗ್ರೆಸ್ ವಿರುದ್ಧ ಹೌಹಾರಿದ ಜೆಡಿಎಸ್

Facebook
Twitter
Telegram
WhatsApp

ಬೆಂಗಳೂರು : ರಾಜ್ಯದ ಜನ ಇಷ್ಟು ದಿನ ಟೊಮ್ಯಾಟೋ, ತರಕಾರಿ,ಆಹಾರ ಧಾನ್ಯ, ಗ್ಯಾಸ್ ಇತ್ಯಾದಿಗಳ ಬೆಲೆ ಏರಿಕೆಯಿಂದ  ಬಸವಳಿದು ಹೋಗಿದ್ದಾರೆ. ಈಗ ವರ್ಗಾವಣೆ ದರಪಟ್ಟಿಯಿಂದ ಅಧಿಕಾರಿ, ನೌಕರರೂ ಹೌಹಾರಿದ್ದಾರೆ. ಇದು @INCKarnataka ಸರಕಾರದ 6ನೇ ಗ್ಯಾರಂಟಿ. ಒಂದು ಕಡೆ ಉಚಿತ ಕೊಡುಗೆ! ಇನ್ನೊಂದು ಕಡೆ ಖಚಿತ ಸುಲಿಗೆ.

ಭಾಗ್ಯಗಳ ಮೇಲೆ ಭಾಗ್ಯಗಳನ್ನು ಕೊಟ್ಟ @INCKarnataka ಸರಕಾರ ಕೊಡುತ್ತಿರುವ ವರ್ಗಾವಣೆ ‘ ಸಂಕಷ್ಟಭಾಗ್ಯ ‘ ವರ್ಣಿಸದಸಳ. ಕೊಡುಗೆ ಮತ್ತು ಸುಲಿಗೆ ಒಟ್ಟೊಟ್ಟಿಗೆ ಕೊಂಡೊಯ್ಯುವುದೇ ಅಭಿವೃದ್ದಿಯ ಹೊಸ ಭರವಸೆ, ಹೊಸ ಕನಸು ಎಂಬುದು ನನಗೆ ಈಗಷ್ಟೇ ಅರ್ಥವಾಗಿದೆ. ಕರ್ನಾಟಕ ಮಾದರಿ ಅಭಿವೃದ್ಧಿ ಎಂದರೆ ಇದೇನಾ?

ಈ @INCKarnataka ಸರಕಾರ ಬಂದು ಎರಡು ತಿಂಗಳೂ ಕಳೆದಿಲ್ಲ. ಆಗಲೇ ಕಾಸಿಗಾಗಿ ಹುದ್ದೆ ಬಿಸ್ನೆಸ್ ಪರಾಕಾಷ್ಠೆ ಮುಟ್ಟಿದ್ದು, ಇವರು ವರ್ಗಾವಣೆ ಅಂಕದಲ್ಲಿ ‘ ಪರಕಾಯ ಪ್ರವೇಶ ‘ ಮಾಡಿದ್ದಾರೆ. ಗ್ಯಾರಂಟಿ, ಭಾಗ್ಯಗಳ ಮೂಲಕ ಜನರನ್ನು ಯಾಮಾರಿಸಿ ಇವರು ಹುಂಡಿಗಳನ್ನು ಭರ್ತಿ ಮಾಡಿಕೊಳ್ಳುತ್ತಿದ್ದಾರೆ.

ಇದೇ @INCKarnataka ಅಧಿಕಾರಕ್ಕೆ ಬರಲು ಹಿಂದಿನ @BJP4Karnataka ಸರಕಾರದ ವಿರುದ್ಧ ರೇಟ್ ಕಾರ್ಡ್ ಬಿಡುಗಡೆ ಮಾಡಿ ಪ್ರಚಾರ ಮಾಡಿತ್ತು. ಈಗ ಕೈ ಸರಕಾರದ ರೇಟ್ ಕಾರ್ಡ್ ಎಲ್ಲರ ಕೈಗಳಲ್ಲೂ ನಲಿದು ನರ್ತಿಸುತ್ತಿದೆ. #CashForPosting ಸರಕಾರದ ‘ ಅಧಿಕೃತ ಅರ್ಥನೀತಿ ‘ ಆಗಿದೆ.

ಹನಿಮೂನ್ ಪೀರಿಯಡ್ ಹೊತ್ತಿನಲ್ಲೇ ಹೀಗಾದರೆ ಫುಲ್ ಮೂನ್ ಸಮಯದಲ್ಲಿ ಇದು ಇನ್ನಾವ ಹಂತಕ್ಕೆ ಹೋಗಲಿದೆ ಎನ್ನುವ ಊಹೆ ಜನರಿಗೇ ಬಿಟ್ಟಿದ್ದು. ಇಂಥ ಕಮಿಷನ್’ಗೇಡಿ ಸರಕಾರದ ಬಗ್ಗೆ ಸರಕಾರಿ ನೌಕರರು, ಅಧಿಕಾರಿಗಳು ಆತಂಕಗೊಂಡಿದ್ದಾರೆ. ಜನರಲ್ಲೂ ಆಕ್ರೋಶ ಮಡುಗತ್ತುತ್ತಿದೆ ಎಂದು ಜೆಡಿಎಸ್ ಸರಣಿ ಟ್ವೀಟ್ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸರ್ಕಾರಕ್ಕೆ ಸೆಡ್ಡು ಹೊಡೆದು ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ನಿಲ್ಲಿಸಿದ್ದೇವೆ : ಶಾಸಕ ಎಂ ಟಿ ಕೃಷ್ಣಪ್ಪ

  ವರದಿ ಮತ್ತು ಫೋಟೋ ಕೃಪೆ ರಂಗಸ್ವಾಮಿ, ಗುಬ್ಬಿ ಮೊ : 99019 53364 ಸುದ್ದಿಒನ್, ಗುಬ್ಬಿ, ಸೆಪ್ಟೆಂಬರ್. 13 : ತಾಲೂಕಿನ ಕಲ್ಲೂರು ಗ್ರಾಮದ ಕೆರೆ ಕೋಡಿಬಿದ್ದ ಹಿನ್ನೆಲೆ ತುರುವೇಕೆರೆ ಶಾಸಕ ಎಂ

ನಂದಿನಿ ಹಾಲಿನ ದರ ಹೆಚ್ಚಳ ಮಾಡ್ತೇವೆ.. ಆ ಹಣ ರೈತರಿಗೆ ಹೋಗುತ್ತೆ : ಸಿದ್ದರಾಮಯ್ಯ ಘೋಷಣೆ

  ರಾಮನಗರ: ಕಳೆದ ಕೆಲ ತಿಂಗಳ ಹಿಂದಷ್ಟೇ ನಂದಿನಿ ಹಾಲನ್ನು ಹೆಚ್ಚು ಮಾಡಿ, ಹಾಲಿನ ದರವನ್ನು ಹೆಚ್ಚಳ ಮಾಡಲಾಗಿತ್ತು. ಆದರೆ ಈಗ ಮತ್ತೆ ನಂದಿನಿ ದರವನ್ನು ಹೆಚ್ಚಳ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು

ಹಿರಿಯ ನಾಗರಿಕರ ಬಗ್ಗೆ ಅಸಡ್ಡೆ ಅಸಹನೆ ಮನೋಭಾವ ಸಲ್ಲದು : ರಂಗಪ್ಪ ರೆಡ್ಡಿ

  ಚಿತ್ರದುರ್ಗ. ಸೆ.13: ಹಿರಿಯ ನಾಗರಿಕರ ಬಗ್ಗೆ ಅಸಡ್ಡೆ, ಅಸಹ್ಯ ಮನೋಭಾವ ಸಲ್ಲದು ಎಂದು ಎಂದು ಹಿರಿಯ ನಾಗರಿಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಂಗಪ್ಪ ರೆಡ್ಡಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ

error: Content is protected !!