ಬೆಂಗಳೂರು : ರಾಜ್ಯದ ಜನ ಇಷ್ಟು ದಿನ ಟೊಮ್ಯಾಟೋ, ತರಕಾರಿ,ಆಹಾರ ಧಾನ್ಯ, ಗ್ಯಾಸ್ ಇತ್ಯಾದಿಗಳ ಬೆಲೆ ಏರಿಕೆಯಿಂದ ಬಸವಳಿದು ಹೋಗಿದ್ದಾರೆ. ಈಗ ವರ್ಗಾವಣೆ ದರಪಟ್ಟಿಯಿಂದ ಅಧಿಕಾರಿ, ನೌಕರರೂ ಹೌಹಾರಿದ್ದಾರೆ. ಇದು @INCKarnataka ಸರಕಾರದ 6ನೇ ಗ್ಯಾರಂಟಿ. ಒಂದು ಕಡೆ ಉಚಿತ ಕೊಡುಗೆ! ಇನ್ನೊಂದು ಕಡೆ ಖಚಿತ ಸುಲಿಗೆ.
ಭಾಗ್ಯಗಳ ಮೇಲೆ ಭಾಗ್ಯಗಳನ್ನು ಕೊಟ್ಟ @INCKarnataka ಸರಕಾರ ಕೊಡುತ್ತಿರುವ ವರ್ಗಾವಣೆ ‘ ಸಂಕಷ್ಟಭಾಗ್ಯ ‘ ವರ್ಣಿಸದಸಳ. ಕೊಡುಗೆ ಮತ್ತು ಸುಲಿಗೆ ಒಟ್ಟೊಟ್ಟಿಗೆ ಕೊಂಡೊಯ್ಯುವುದೇ ಅಭಿವೃದ್ದಿಯ ಹೊಸ ಭರವಸೆ, ಹೊಸ ಕನಸು ಎಂಬುದು ನನಗೆ ಈಗಷ್ಟೇ ಅರ್ಥವಾಗಿದೆ. ಕರ್ನಾಟಕ ಮಾದರಿ ಅಭಿವೃದ್ಧಿ ಎಂದರೆ ಇದೇನಾ?
ಈ @INCKarnataka ಸರಕಾರ ಬಂದು ಎರಡು ತಿಂಗಳೂ ಕಳೆದಿಲ್ಲ. ಆಗಲೇ ಕಾಸಿಗಾಗಿ ಹುದ್ದೆ ಬಿಸ್ನೆಸ್ ಪರಾಕಾಷ್ಠೆ ಮುಟ್ಟಿದ್ದು, ಇವರು ವರ್ಗಾವಣೆ ಅಂಕದಲ್ಲಿ ‘ ಪರಕಾಯ ಪ್ರವೇಶ ‘ ಮಾಡಿದ್ದಾರೆ. ಗ್ಯಾರಂಟಿ, ಭಾಗ್ಯಗಳ ಮೂಲಕ ಜನರನ್ನು ಯಾಮಾರಿಸಿ ಇವರು ಹುಂಡಿಗಳನ್ನು ಭರ್ತಿ ಮಾಡಿಕೊಳ್ಳುತ್ತಿದ್ದಾರೆ.
ಇದೇ @INCKarnataka ಅಧಿಕಾರಕ್ಕೆ ಬರಲು ಹಿಂದಿನ @BJP4Karnataka ಸರಕಾರದ ವಿರುದ್ಧ ರೇಟ್ ಕಾರ್ಡ್ ಬಿಡುಗಡೆ ಮಾಡಿ ಪ್ರಚಾರ ಮಾಡಿತ್ತು. ಈಗ ಕೈ ಸರಕಾರದ ರೇಟ್ ಕಾರ್ಡ್ ಎಲ್ಲರ ಕೈಗಳಲ್ಲೂ ನಲಿದು ನರ್ತಿಸುತ್ತಿದೆ. #CashForPosting ಸರಕಾರದ ‘ ಅಧಿಕೃತ ಅರ್ಥನೀತಿ ‘ ಆಗಿದೆ.
ಹನಿಮೂನ್ ಪೀರಿಯಡ್ ಹೊತ್ತಿನಲ್ಲೇ ಹೀಗಾದರೆ ಫುಲ್ ಮೂನ್ ಸಮಯದಲ್ಲಿ ಇದು ಇನ್ನಾವ ಹಂತಕ್ಕೆ ಹೋಗಲಿದೆ ಎನ್ನುವ ಊಹೆ ಜನರಿಗೇ ಬಿಟ್ಟಿದ್ದು. ಇಂಥ ಕಮಿಷನ್’ಗೇಡಿ ಸರಕಾರದ ಬಗ್ಗೆ ಸರಕಾರಿ ನೌಕರರು, ಅಧಿಕಾರಿಗಳು ಆತಂಕಗೊಂಡಿದ್ದಾರೆ. ಜನರಲ್ಲೂ ಆಕ್ರೋಶ ಮಡುಗತ್ತುತ್ತಿದೆ ಎಂದು ಜೆಡಿಎಸ್ ಸರಣಿ ಟ್ವೀಟ್ ಮಾಡಿದೆ.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…