Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜಬೀದಿಗಳಲ್ಲಿ ಸಾಗಿದ ಕಣಿವೆಮಾರಮ್ಮ ದೇವಿಯ ಭವ್ಯ ಮೆರವಣಿಗೆ

Facebook
Twitter
Telegram
WhatsApp

ವರದಿ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್

ಚಿತ್ರದುರ್ಗ : ಕಣಿವೆ ಮಾರಮ್ಮನ ಜಾತ್ರಾ ಮಹೋತ್ಸವದ ಅಂಗವಾಗಿ ನಗರ ಪೊಲೀಸ್ ಠಾಣೆ ಆವರಣದಲ್ಲಿರುವ ಕಣಿವೆಮಾರಮ್ಮನ ಮೆರವಣಿಗೆ ಗುರುವಾರ ದೇವಸ್ಥಾನದ ಮುಂಭಾಗದಿಂದ ಆರಂಭಗೊಂಡು ಸಕಲ ವಾದ್ಯಗಳೊಂದಿಗೆ ರಾಜ ಬೀದಿಗಳಲ್ಲಿ ಸಾಗಿತು. ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ನಯೀಂರವರು ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.

ಬಸವಮಂಟಪ ಮುಂಭಾಗದಿಂದ ದೊಡ್ಡಪೇಟೆ, ಉಚ್ಚಂಗಿಯಲ್ಲಮ್ಮ ದೇವಸ್ಥಾನದ ಮುಂಭಾಗ, ಚಿಕ್ಕಪೇಟೆ, ಆನೆಬಾಗಿಲು, ಗಾಂಧಿವೃತ್ತ, ಬಿ.ಡಿ.ರಸ್ತೆ ಮೂಲಕ ಸಾಗಿದ ಮೆರವಣಿಗೆ ದೇವಸ್ಥಾನಕ್ಕೆ ಹಿಂದಿರುಗಿತು. ಡೊಳ್ಳು, ತಮಟೆ, ಉರುಮೆ, ಕಹಳೆ ಮೆರವಣಿಗೆಯಲ್ಲಿ ಮೊಳಗಿದವು, ವಿವಿಧ ಬಗೆಯ ಆಭರಣ ಹಾಗೂ ಹೂವಿನ ಹಾರಗಳಿಂದ ಕಣಿವೆಮಾರಮ್ಮನನ್ನು ಸಿಂಗರಿಸಲಾಗಿತ್ತು. ತಲೆಯ ಮೇಲೆ ದೇವರುಗಳನ್ನು ಹೊತ್ತಿದ್ದ ಮಹಿಳೆಯರು ಮೆರವಣಿಗೆಯಲ್ಲಿ ಕುಣಿದು ಸಂಭ್ರಮಿಸಿದರು.

ನಿವೃತ್ತ ಸಬ್‌ಇನ್ಸ್ಪೆಕ್ಟರ್‌ಗಳಾದ ಶ್ಯಾಂಪ್ರಸಾದ್, ಕೆ.ಪಿ.ವೆಂಕಟೇಶ್, ನಿವೃತ್ತ ಎ.ಎಸ್.ಐ.ಗಳಾದ ನಾಗೇಂದ್ರಪ್ರಸಾದ್, ನಾಗೇಂದ್ರಪ್ಪ, ಮಹೇಶ್ವರಯ್ಯ, ಲಕ್ಷಿö್ಮನರಸಿಂಹಸ್ವಾಮಿ, ಮಹೇಶ್ವರಪ್ಪ, ಉಪ್ಪಾರ ಸಮಾಜದ ಮುಖಂಡ ಆರ್.ಮೂರ್ತಿ ಸೇರಿದಂತೆ ಪೊಲೀಸ್ ಇಲಾಖೆ ಅನೇಕ ನಿವೃತ್ತರು ಮೆರವಣಿಗೆಯಲ್ಲಿ ಭಾಗವಹಿಸಿ ಕಣಿವೆಮಾರಮ್ಮನಿಗೆ ಭಕ್ತಿ ಸಮರ್ಪಿಸಿದರು.

 

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

ಸಾಲ ಇರುವ ಜಮೀನು ನೀಡಿ ಜ್ಯೂ.ಎನ್ಟಿಆರ್ ಗೆ ಮೋಸ ಮಾಡಿದ ಯುವತಿ ವಿರುದ್ಧ ನಟ ದೂರು..!

ಜ್ಯೂ. NTR ಆಸ್ತಿಯೊಂದನ್ನು ಖರೀದಿಸಲು ಹೋಗಿ ಮೋಸ ಹೋಗಿದ್ದಾರೆ. ಇದೀಗ ಮೋಸ ಮಾಡಿದ ಯುವತಿ ವಿರುದ್ಧ ಕೋರ್ಟ್ ಮೊರೆ ಹೋಗಿದ್ದಾರೆ. ಆಸ್ತಿ ಮೇಲೆ ಕೋಟ್ಯಾಂತರ ರೂಪಾಯಿ ಸಾಲವಿದ್ದು, ನ್ಯಾಯ ಕೇಳುತ್ತಿದ್ದಾರೆ. ಜ್ಯೂ. NTR, ಆರ್

error: Content is protected !!