Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಚಿವರಾದ ಟಿ. ರಘುಮೂರ್ತಿ ಅವರಿಗೆ ನಾಳೆ ಚಿತ್ರದುರ್ಗದಲ್ಲಿ ಭರ್ಜರಿ ಸ್ವಾಗತ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ ಆ. 04 : ನೂತನ ಸಚಿವರಾಗಿ ಪದಗ್ರಹಣ ಮಾಡಿರುವ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರಿಗೆ ಪುರ ಪ್ರವೇಶದ ಹಿನ್ನಲೆಯಲ್ಲಿ ಆ. 5 ರಂದು ನಗರದಲ್ಲಿ ಅದ್ದೂರಿ ಸ್ವಾಗತ ಕೋರಲು ಚಿತ್ರದುರ್ಗ ನಾಯಕ ಸಮಾಜದಿಂದ ತೀರ್ಮಾನಿಸಲಾಗಿದೆ ಎಂದು ನಾಯಕ ಸಮಾಜದ ಜಿಲ್ಲಾಧ್ಯಕ್ಷ ಹಾಗೂ ನಗರಸಭೆ ಮಾಜಿ ಅಧ್ಯಕ್ಷ ಬಿ.ಕಾಂತರಾಜ್ ತಿಳಿಸಿದರು.

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗದಲ್ಲಿ ತಿಪ್ಪೇಸ್ವಾಮಿ ಅವರ ನಂತರ ರಘುಮೂರ್ತಿ ಅವರಿಗೆ ಸಚಿವರಾಗುವ ಅವಕಾಶ ಸಿಕ್ಕಿದೆ.  ಸಚಿವರಾದ ನಂತರ ಟಿ.ರಘು ಮೂರ್ತಿ ಅವರು ನಾಳೆ ಚಿತ್ರದುರ್ಗ ನಗರಕ್ಕೆ ಆಗಮಿಸುತ್ತಿದ್ದಾರೆ. ಅವರನ್ನು ಸಾರ್ವಜನಿಕರು ಹಾಗೂ ಅನೇಕ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಗುವುದು ಈ ಹಿನ್ನೆಲೆಯಲ್ಲಿ ಮದಕರಿ ನಾಯಕ ವೃತ್ತದಲ್ಲಿ ಅದ್ದೂರಿ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಇದಕ್ಕೂ ಮೊದಲು ಚಳ್ಳಕೆರೆ ಗೇಟ್‍ನಿಂದ ಮೆರವಣಿಗೆ ನಡೆಯಲಿದ್ದು, ಮದಕರಿ ವೃತ್ತದಲ್ಲಿ ವೇದಿಕೆ ಕಾರ್ಯಕ್ರಮ ಇರಲಿದೆ. ಯುವಕರ ಒತ್ತಾಯದ ಮೇರೆಗೆ ಸ್ಟಾಡಿಂಗ್ ಡಿಜೆ ಕೂಡಾ ಇರಲಿದೆ ಎಂದ ಅವರು. ಸಮುದಾಯದವರು ಪಕ್ಷಾತೀತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮನವಿ ಮಾಡಿದರು.

ನಿವೃತ್ತ ಪ್ರಾಚಾರ್ಯ ಪ್ರೊ.ಗುಡದೇಶ್ವರಪ್ಪ ಮಾತನಾಡಿ, ಜಿಲ್ಲೆಯಲ್ಲಿ ಹಿಂದೆಂದೂ ಆಗದಷ್ಟು ಅಭಿವೃದ್ಧಿ ಕೆಲಸಗಳನ್ನು ಟಿ.ರಘುಮೂರ್ತಿ ಮಾಡಿದ್ದಾರೆ. ಅವರನ್ನು ಜಾತ್ಯಾತೀತವಾಗಿ ಜಿಲ್ಲೆಯ ಜನ ಒಪ್ಪಿಕೊಳ್ಳುತ್ತಾರೆ. ಚಳ್ಳಕೆರೆ ಮಾದರಿಯಲ್ಲಿ ಜಿಲ್ಲೆಯ ಅಭಿವೃದ್ಧಿ ಆಗಬೇಕು ಎನ್ನುವ ಅಭಿಲಾಷೆ ಇದೆ  ಪಕ್ಷಾತೀತವಾಗಿ ಅವರ ಪುರಪ್ರವೇಶ ಕಾರ್ಯಕ್ರಮ ಮಾಡಬೇಕು ಎಂದು ಸಮಾಜ ತೀರ್ಮಾನಿಸಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಮುಖಂಡ ಲಿಂಗಾವರಹಟ್ಟಿ ತಿಪ್ಪೇಸ್ವಾಮಿ ಮಾತನಾಡಿ, ಶಾಸಕರಾದ ಟಿ.ರಘುಮೂರ್ತಿ ಅವರಿಗೆ ನಾಯಕ ಸಮುದಾಯದವರು ಎಂದು ಸಚಿವ ಸ್ಥಾನ ಕೊಟ್ಟಿಲ್ಲ. ಅವರು ಮಾಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ನೋಡಿ ಆ ಸ್ಥಾನ ಒಲಿದು ಬಂದಿದೆ. ಅದೇ ರೀತಿಯಲ್ಲಿ ಚಿತ್ರದುರ್ಗದ ಅಭಿವೃದ್ಧಿ ಆಗಬೇಕು.ಹಿಂದೆ ನಗರಸಭೆ ಪ್ರಥಮ ಅಧ್ಯಕ್ಷರಾದ ಭೀಮಪ್ಪ ನಾಯಕರು ಮರ್ಚೆಂಟ್ ಬ್ಯಾಂಕ್ ಸ್ಥಾಪನೆ ಮಾಡಿದ್ದರು. ಅದು ಸಮುದಾಯದ ಕೈಯಲ್ಲಿಲ್ಲ. ಆದರೆ, ಅದನ್ನು ಮೀರಿದಂತೆ ಬೆಳೆದಿರುವ ಡಿಸಿಸಿ ಬ್ಯಾಂಕಿಗೆ ರಘುಮೂರ್ತಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿರುವುದು ಅವರ ಬೆಳವಣಿಗೆ ಹಾಗೂ ವ್ಯಕ್ತಿತ್ವ ತೋರಿಸುತ್ತದೆ ಎಂದರು.

ಸುದ್ದಿಗೋಷ್ಠಿಯಲ್ಲಿ ನಗರಸಭೆ ಮಾಜಿ ಸದಸ್ಯ ದೀಪಕ್, ಅಹೋಬಲ ಟಿವಿಎಸ್ ಮಾಲಿಕ ಪಿ.ವಿ.ಅರುಣ್, ಮುಖಂಡ ಸೋಮೇಂದ್ರ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now