Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದುಶ್ಚಟದಿಂದ ದೂರವಿರುವ ಜನರಿಂದ ಮಾತ್ರ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯ : ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ

Facebook
Twitter
Telegram
WhatsApp

ವರದಿ : ಕೆ.ಎಂ. ಮುತ್ತುಸ್ವಾಮಿ ಕಣ್ಣನ್

ಚಿತ್ರದುರ್ಗ (ಅ.10): ದುಶ್ಚಟದಿಂದ ದೂರವಿರುವ ಜನರಿಂದ ಮಾತ್ರ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್, ಚಿತ್ರದುರ್ಗ/ಸಿರಿಗೆರೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಂಯುಕ್ತಾಶ್ರಯದಲ್ಲಿ ಗಾಂಧಿಜಯಂತಿ ಸಂಭ್ರಮಾಚರಣೆ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ವಿಶ್ವಕರ್ಮ ಕಾಳಿಕಾಂಬ ಕಲ್ಯಾಣ ಮಂಟಪದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಗಾಂಧಿಸ್ಮøತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಪುರುಷರಷ್ಟೆ ಮಹಿಳೆಯರ ಜವಾಬ್ದಾರಿಯೂ ಇದೆ. ರಾಷ್ಟ್ರಪಿತ ಮಹಾತ್ಮಗಾಂಧಿರವರ ತತ್ವಾದರ್ಶಗಳು ಇಂದಿನ ಯುವ ಪೀಳಿಗೆಗೆ ಅತ್ಯವಶ್ಯಕ. ಮದ್ಯದ ಚಟಕ್ಕೆ ಬಲಿಯಾದ ಕುಟುಂಬ ಆರ್ಥಿಕವಾಗಿ ದುರ್ಬಲವಾಗುವ ಜೊತೆಗೆ ಶಾಂತಿ ನೆಮ್ಮದಿಯನ್ನು ಕಳೆದುಕೊಂಡು ಜೀವನವಿಡಿ ಪರಿತಪಿಸಬೇಕಾಗುತ್ತದೆ. ಹಾಗಾಗಿ ಮಹಿಳೆಯರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಸಂಸ್ಕಾರವಂತರನ್ನಾಗಿಸುವಂತೆ ಹೇಳಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಚಿತ್ರದುರ್ಗ ಪ್ರಾದೇಶಿಕ ವ್ಯಾಪ್ತಿಯ ನಿರ್ದೇಶಕಿ ಗೀತಾ ಬಿ.ಮಾತನಾಡಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗಡೆರವರ ಮಾರ್ಗದರ್ಶನದಲ್ಲಿ ಗ್ರಾಮಾಭಿವೃದ್ದಿ ಯೋಜನೆಯ ಮೂಲಕ ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಸ್ವಸಹಾಯ ಸಂಘಗಳ ಸ್ತ್ರೀಯರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ಕೆಲಸ ನಲವತ್ತು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿದೆ. ಪೂಜ್ಯರು ಗಾಂಧಿ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದಾರೆ. ರಾಜ್ಯಾದ್ಯಂತ 1589 ಮದ್ಯವರ್ಜನ ಶಿಬಿರಗಳನ್ನು ನಡೆಸಿ 1.25 ಲಕ್ಷ ಮದ್ಯವ್ಯಸನಿಗಳನ್ನು ದುಶ್ಚಟದಿಂದ ಮುಕ್ತರನ್ನಾಗಿಸಿದ ಕೀರ್ತಿ ಡಾ.ಡಿ.ವೀರೇಂದ್ರಹೆಗಡೆರವರಿಗೆ ಸಲ್ಲಬೇಕು ಎಂದರು.

ನಿವೃತ್ತ ಉಪನ್ಯಾಸಕಿ ಸಿ.ಬಿ.ಶೈಲ ಮಾತನಾಡಿ ಸತ್ಯ ಮತ್ತು ಅಹಿಂಸೆಯೆ ಮಹಾತ್ಮಗಾಂಧಿರವರ ಅಸ್ತ್ರವಾಗಿತ್ತು. ಗಾಂಧಿತತ್ವಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಇಂತಹ ಕಾರ್ಯಕ್ರಮಗಳಿಗೆ ನಿಜವಾದ ಅರ್ಥ ಬರುತ್ತದೆ ಎಂದು ಹೇಳಿದರು.
ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಮಾರುತೇಶ್ ಅಧ್ಯಕ್ಷತೆ ವಹಿಸಿದ್ದರು.

ನಗರಸಭೆ ಮಾಜಿ ಸದಸ್ಯೆ ಛಾಯ ಸುರೇಶ್, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರುಗಳಾದ ಕೆ.ಆರ್.ಮಂಜುನಾಥ್, ಶ್ರೀಮತಿ ರೂಪ ಜನಾರ್ಧನ್, ರಾಜುನಾಯ್ಕ, ಮಹಮದ್ ನೂರುಲ್ಲಾ, ವಿಶ್ವಕರ್ಮ ಕಾಳಿಕಾಂಬ ಕಲ್ಯಾಣ ಮಂಟಪದ ಉಪಾಧ್ಯಕ್ಷ ಎಸ್.ಕೃಷ್ಣಾಚಾರ್ಯ ಯೋಜನಾಧಿಕಾರಿಗಳಾದ ಅಶೋಕ್, ಪ್ರವೀಣ್ ಎ.ಜಿ.ಇವರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ದುಶ್ಚಟ ಮುಕ್ತ ಸಮಾಜ ನಿರ್ಮಾಣ ಕುರಿತಂತೆ ಕೈಗೊಳ್ಳಲಾದ ನಿರ್ಣಯದ ಠರಾವು ಮಂಡನೆ ಪ್ರತಿಯನ್ನು ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಸಲ್ಲಿಸಲಾಯಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!