
ಬೆಂಗಳೂರು: ಕೆಲಸ ಹುಡುಕುತ್ತಿರುವವರಿಗೆ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ನಾಳೆ ಸರ್ಕಾರದಿಂದಾನೆ ಉದ್ಯೋಗ ಮೇಳೆ ನಡೆಯಲಿದೆ. ಮಲ್ಲೇಶ್ವರಂನ 18ನೇ ಕ್ರಾಸ್ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಪಿಯುಸಿ ಕಾಲೇಜು ಆವರಣದಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದೆ.

ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಷನ್ ವತಿಯಿಂದ ಉದ್ಯೋಗ ಮೇಳ ನಡೆಯಲಿದ್ದ. ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಉದ್ಯೋಗ ಮೇಳ ನಡೆಯಲಿದೆ.
ಸರ್ಕಾರದಿಂದ ನಡೆಯುತ್ತಿರುವ ಈ ಉದ್ಯೋಗ ಮೇಳದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿ ಸೇರಿದಂತೆ ಯಾವುದೇ ಪದವಿ ಪಡೆದವರು ಭಾಗವಹಿಸಬಹುದು. ಹಲವು ಪ್ರತಿಷ್ಠಿತ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿದೆ. ಸಂದರ್ಶನ ನಡೆಸಿ, ಅರ್ಹ ಅಭ್ಯರ್ಥಿಗಳನ್ನು ಆಯ್ಜೆ ಮಾಡಲಾಗುತ್ತದೆಮ ಉದ್ಯೋಗ ಮೇಳಕ್ಕೆ ಬರುವ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ, ಪಾಸ್ ಪೋರ್ಟ್ ಸೈಜ್ ಫೋಟೋ, ಆಧಾರ್ ಕಾರ್ಡ್ ಹಾಗೂ ರೆಸ್ಯೂಮ್ ಅನ್ನು ಮರೆಯದೆ ತೆಗೆದುಕೊಂಡು ಹೋಗಬೇಕಾಗಿದೆ.

GIPHY App Key not set. Please check settings