ಚಿತ್ರದುರ್ಗ | ಚಿಕ್ಕಗೊಂಡನಹಳ್ಳಿ ಬಳಿ ಭೀಕರ ಅಪಘಾತ : ಜಗಳೂರಿನ ಇಬ್ಬರ ಸಾವು..!

1 Min Read

 

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 29 : ಲಾರಿ ಓವರ್ ಟೇಕ್ ಮಾಡಲು ಹೋಗಿ ಕಾರು ಲಾರಿಗೆ ಡಿಕ್ಕಿಯಾದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ಚಿತ್ರದುರ್ಗ ತಾಲ್ಲೂಕಿನ ಚಿಕ್ಕಗೊಂಡನಹಳ್ಳಿ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ತಡರಾತ್ರಿ 1 ಗಂಟೆ ವೇಳೆಗೆ ಈ ಘಟನೆ ನಡೆದಿದೆ. ಮೃತರನ್ನು ಜಗಳೂರು ಮೂಲದ ಫಯಾಜ್(30) ಹಾಗೂ ಆಶ್ರಫ್(30) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮತ್ತೊಬ್ಬ ಗಂಭೀರವಾಗಿ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಾಲಿಸಲಾಗಿದೆ.

ಜಗಳೂರು ಮೂಲದ ಮೂವರು ಚಿತ್ರದುರ್ಗದಿಂದ ಜಗಳೂರಿಗೆ ಕಡೆಗೆ ಹೋಗುವಾಗ ಚಿಕ್ಕಗೊಂಡನಹಳ್ಳಿ ಬಳಿ ಮುಂದೆ ಚಲಿಸುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಲಾರಿಯ ಹಿಂಬದಿಗೆ ವೇಗವಾಗಿ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಗೊಂಡಿದೆ.
ವಿಷಯ ತಿಳಿದ ತಕ್ಷಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತುರುವನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks