Connect with us

Hi, what are you looking for?

ಪ್ರಮುಖ ಸುದ್ದಿ

ನಕಲಿ ಚಿನ್ನದ ನಾಣ್ಯ ಕೊಟ್ಟು ಪಂಗನಾಮ ಹಾಕಿದ್ದ ಓರ್ವನ ಬಂಧನ

ದಾವಣಗೆರೆ: ಅಸಲಿ ಚಿನ್ನದ ನಾಣ್ಯಗಳನ್ನು ಕೊಡುವುದಾಗಿ ನಂಬಿಸಿ ವೃದ್ಧ ದಂಪತಿಗಳಿಂದ ಹಣ, ಬಂಗಾರದ ಸರ ಲಪಟಾಯಿಸಿದ್ದ ಓರ್ವ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಮತ್ತೋರ್ವನಿಗಾಗಿ ಜಾಲ ಬೀಸಿದ್ದಾರೆ.

ಮೈಸೂರು ಜಿಲ್ಲೆ, ತಾಲ್ಲೂಕಿನ ಬೆಳವಾಡಿ ಗ್ರಾಮದ
ತಿಮ್ಮೇಶ (52) ಬಾತ್ಮಿದಾರರ ಖಚಿತ ಮಾಹಿತಿ ಮೇರೆಗೆ ಈತನನ್ನು ಸವಳಂಗ ಗ್ರಾಮದಲ್ಲಿ ಬಂಧಿಸಿರುವ ನ್ಯಾಮತಿ ಪೊಲೀಸರು ವಂಚನೆಗೊಳಗಾದ ದಂಪತಿಗಳಿಂದ ದೋಚಿದ್ದ 2.10 ಲಕ್ಷ ನಗದು, ಚಿನ್ನದ ಸರವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ‌ ಮತ್ತು ತಾಲ್ಲೂಕಿನ ವಾಸ ಸಾರಾಡೋಗು ಗ್ರಾಮ, ಕುಂದೂರಿನ
ಮಂಜುನಾಥ 60 ವರ್ಷ, ಧರ್ಮಸ್ಥಳಕ್ಕೆ ಹೋಗಿದ್ದ ಸಂದರ್ಭದಲ್ಲಿ ರಾಜಾ ಎಂಬ ವ್ಯಕ್ತಿ ಪರಿಚಯವಾಗಿ, ನಂತರ ಅಸಲಿ ಚಿನ್ನದ ನಾಣ್ಯಗಳನ್ನು ಕೊಟ್ಟು ನಂಬಿಸಿದ್ದ. ತದನಂತರದಲ್ಲಿ ಕಳೆದ ಮಾ. 20 ರಂದು ಕುದುರೆಕೊಂಡ ಗ್ರಾಮಕ್ಕೆ ಬಂದು ಅವರಿಗೆ ಪೋನ್ ಮಾಡಿದಾಗ ಕುದುರೆಕೊಂಡ ಗ್ರಾಮದಿಂದ ಯರಗನಾಳು ಎಂಬ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ರಾಜ ಮತ್ತು ಅವರ ಜೊತೆ ಓರ್ವ ಮಹಿಳೆ ಸೇರಿ ಹಣ ಪಡೆದು, ಅರ್ಧ ಕೆ.ಜಿ. ತೂಕದ ನಕಲಿ ಚಿನ್ನದ ನಾಣ್ಯಗಳನ್ನು ಕೊಟ್ಟಿದ್ದು, ಶಿವಮೊಗ್ಗದಲ್ಲಿ ಪರೀಕ್ಷೆ ನಡೆಸಿದಾಗ ಅವು ನಕಲಿ ಎಂದು‌ ತಿಳಿದುಬಂದಿದೆ.

ನಂತರ ಆ ವ್ಯಕ್ತಿಗೆ ಕರೆ ಮಾಡಿದಾಗ ಸ್ವಿಚ್‍ಆಫ್ ಎಂದು ಬಂದಿದ್ದು, ದಂಪತಿಗಳು ನ್ಯಾಮತಿ ಠಾಣೆಗೆ ಹಾಜರಾಗಿ ದೂರು ಸಲ್ಲಿಸಿದ್ದರು.‌ತಕ್ಷಣ ಪೊಲೀಸರು ಕಾರ್ಯಕ್ರವೃತ್ತರಾದರು.

ಪೊಲೀಸ್ ಅಧೀಕ್ಷಕರವರಾದ ಹನುಮಂತರಾಯ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ರಾಜೀವ್.ಎಂ ಹಾಗೂ ಚನ್ನಗಿರಿ ಪೊಲೀಸ್ ಉಪಾಧೀಕ್ಷಕ ಡಾ.ಸಂತೋಷ್ ಕೆ.ಎಂ ಮಾರ್ಗದರ್ಶನದಲ್ಲಿ ಹೊನ್ನಾಳಿ ವೃತ್ತ ನಿರೀಕ್ಷಕರಾದ ಟಿ.ವಿ.ದೇವರಾಜ ಅವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಯಿತು. ಪಿಎಸ್.ಐ ಪಿ.ಎಸ್ ರಮೇಶ, ಎ.ಎಸ್.ಐ ಚಂದ್ರು ಹಾಗೂ ಎನ್.ರವಿನಾಯಕ, ಮಂಜಪ್ಪ.ಕೆ, ಮಂಜುನಾಥ, ಮೌನೇಶಾಚಾರಿ, ತಿಮ್ಮರಾಜು, ಚನ್ನೇಶ ಅವರ ತಂಡ ಕಾರ್ಯಚರಣೆ ನಡೆಸಿ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಸುದ್ದಿಒನ್, ದಾವಣಗೆರೆ,(ಜೂನ್.15): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರ ವರದಿಯಲ್ಲಿ 183 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 47668 ಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ ದಾವಣಗೆರೆ 69...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ನಗರದ ವಿ .ಪಿ. ಬಡಾವಣೆಯಲ್ಲಿ ಕನ್ಸರ್‍ವೆನ್ಸಿಗಳನ್ನು ಒತ್ತುವರಿ ಮಾಡಲಾಗಿದೆ ಇವುಗಳನ್ನು ತೆರವು ಮಾಡಿ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಪೌರಾಯುಕ್ತರಿಗೆ ದೂರವಾಣಿ ಮೂಲಕ ಸೂಚನೆ ನೀಡಿದರು. ನಗರದ ವಿ.ಪಿ.ಬಡಾವಣೆಯ...

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ಪ್ರಮುಖ ಸುದ್ದಿ

ಸುದ್ದಿಒನ್,ಬಳ್ಳಾರಿ, (ಜೂ.15) : ಬಳ್ಳಾರಿ-ವಿಜಯನಗರ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್‍ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್‍ನಿಂದ 339 ಜನ ಗುಣಮುಖರಾಗಿದ್ದು ದಿನದಿಂದ ದಿನಕ್ಕೆ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ....

ಪ್ರಮುಖ ಸುದ್ದಿ

ಚಿತ್ರದುರ್ಗ,(ಜೂನ್15): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 95 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 33,997ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 16, ಚಳ್ಳಕೆರೆ 18, ಹಿರಿಯೂರು...

ಕ್ರೀಡೆ

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಗೆದ್ದವರಿಗೆ ಎಷ್ಟು ಮೊತ್ತ ಸಿಗಬಹುದು ಎಂಬ ಪ್ರಶ್ನೆ ಕ್ರಿಕೆಟ್ ಅಭಿಮಾನಿಗಳಿಗೆ ಯಾವಾಗಲೂ ಕಾಡುವಂತ ಪ್ರಶ್ನೆ. ಆ ಪ್ರಶ್ನೆಗೆ ಇಂದು ಐಸಿಸಿ ಉತ್ತರಿಸಿದೆ. ಟೆಸ್ಟ್ ಚಾಂಪಿಯನ್ ಶಿಪ್...

ಪ್ರಮುಖ ಸುದ್ದಿ

ಚಿತ್ರದುರ್ಗ, (ಜೂನ್.15) : ನಗರದ ಅಲೆಮಾರಿ, ಕೂಲಿ ಕಾರ್ಮಿಕರು, ಬಡವರು ಹಾಗೂ ನಿರ್ಗತಿಕರಿಗೆ ಭಾರತೀಯ ರೆಡ್ ಕ್ರಾಸ್ ಚಿತ್ರದುರ್ಗ ಜಿಲ್ಲಾ ಶಾಖೆ ವತಿಯಿಂದ ಅಗತ್ಯ ದಿನಸಿ ವಸ್ತುಗಳನ್ನು ವಿತರಿಸಲಾಯಿತು. ನಗರದ ಪತ್ರಿಕಾ ಭವನದ...

ಪ್ರಮುಖ ಸುದ್ದಿ

ನವದೆಹಲಿ : ಕೋವಿಡ್ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಭೇಟಿಗೆ ಸಿದ್ಧತೆಗಳು ನಡೆದಿವೆ. ವರ್ಷದ ಅಂತ್ಯದಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳಬಹುದು ಎಂದು ಮೂಲಗಳು ತಿಳಿಸಿವೆ. ಆದರೆ ಪ್ರವಾಸದ ಸಮಯ...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ಸಂಚಾರಿ ವಿಜಯ್ ನಮ್ಮೊಂದಿಗಿಲ್ಲ ಎನ್ನಲು ಮನಸ್ಸು ತುಂಬಾ ಭಾರವಾಗುತ್ತಿದೆ. ಆ ದೇವರು ಯಾವ ತಪ್ಪನ್ನು ತನ್ನ ಮೇಲೆ ಹಾಕಿಕೊಳ್ಳೊಲ್ಲ. ಬದುಕೆಂಬ ರಂಗಶಾಲೆಯಲ್ಲಿ ನಾನಾ ಪಾತ್ರಗಳಿಗೆ ತಮಗೆ ತಿಳಿಯದಂತೆ...

error: Content is protected !!