ನಾಳೆ ಹೋರಾಟಗಾರ ಮುರುಘರಾಜೇಂದ್ರ ಒಡೆಯರ್ ಒಂದು ನೆನಪು ಕಾರ್ಯಕ್ರಮ : ಜೆ.ಯಾದವರೆಡ್ಡಿ ಅವರಿಂದ ಉದ್ಘಾಟನೆ

1 Min Read

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.25  : ಕರ್ನಾಟಕ ಮುಸ್ಲಿಂ ಕಲ್ಚರಲ್ ಅಕಾಡೆಮಿ, ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ, ಭ್ರಷ್ಟಾಚಾರ ವಿರೋಧಿ ಸೇನೆ ಸಂಯುಕ್ತಾಶ್ರಯದಲ್ಲಿ ಹೋರಾಟಗಾರ ಮುರುಘರಾಜೇಂದ್ರ ಒಡೆಯರ್ ಒಂದು ನೆನಪು ಕಾರ್ಯಕ್ರಮ ಡಿ.26 ರಂದು ಬೆಳಿಗ್ಗೆ 11 ಕ್ಕೆ ಪತ್ರಕರ್ತರ ಭವನದಲ್ಲಿ ನಡೆಯಲಿದೆ.
ಸಾಮಾಜಿಕ ಚಿಂತಕ ಜೆ.ಯಾದವರೆಡ್ಡಿ ಕಾರ್ಯಕ್ರಮ ಉದ್ಗಾಟಿಸಲಿದ್ದಾರೆ.

ಕೆ.ಕೆ.ಎನ್.ಎಸ್.ಎಸ್.ಜಿಲ್ಲಾ ಸಮಿತಿ ಅಧ್ಯಕ್ಷ ಗಣೇಶ್ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ನಗರಸಭೆ ಮಾಜಿ ಅಧ್ಯಕ್ಷರುಗಳಾದ ಸಿ.ಟಿ.ಕೃಷ್ಣಮೂರ್ತಿ, ಬಿ.ಕಾಂತರಾಜ್, ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂ ಆಲಿ, ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಟಿ.ಜಗದೀಶ್, ರೆವೆರೆಂಡ್ ಫಾದರ್ ಎಂ.ಎಸ್.ರಾಜು, ಹಿರಿಯ ನ್ಯಾಯವಾದಿ ಬಿ.ಕೆ.ರಹಮತ್‍ವುಲ್ಲಾ, ಸಾಹಿತಿ ಪರಶುರಾಮ್ ಗೊರಪ್ಪರ್, ಪಾರ್ಥರಾಜೇಂದ್ರ ಒಡೆಯರ್, ಬಡಗಿ ಕಾರ್ಮಿಕರ ಸಂಘದ ಅಧ್ಯಕ್ಷ ಎ.ಜಾಕೀರ್‍ಹುಸೇನ್, ಕರ್ನಾಟಕ ಶಾಂತಿ ಮತ್ತು ಸೌಹಾರ್ಧ ವೇದಿಕೆ ಅಧ್ಯಕ್ಷ ನರೇನಹಳ್ಳಿ ಅರುಣ್‍ಕುಮಾರ್, ಪಿ.ಸುಭಾನುಲ್ಲಾ, ಸವಿತಾ ಸಮಾಜದ ಹಿರಿಯ ಮುಖಂಡ ಓ.ನರಸಿಂಹಮೂರ್ತಿ ಇವರುಗಳು ಆಗಮಿಸಲಿದ್ದಾರೆಂದು ಕರ್ನಾಟಕ ಮುಸ್ಲಿಂ ಕಲ್ಚರಲ್ ಅಕಾಡೆಮಿ ಅಧ್ಯಕ್ಷ ಎಂ.ಹನೀಫ್ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *