ಬೆಂಗಳೂರು : 2023ರ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಬಂದಿದೆ. ಸರ್ಕಾರ ರಚನೆ ಮಾಡುವುದಕ್ಕೆ ಸಿದ್ಧತೆ ನಡೆಸಿದೆ. ಅದಕ್ಕೂ ಮುನ್ನ ಕಾಂಗ್ರೆಸ್ ಪಕ್ಷದಲ್ಲಿಯೇ ಸಿಎಂ ಖುರ್ಚಿಗಾಗಿ ಕಿತ್ತಾಟ ನಡೆಯುತ್ತಿದೆ. ಸಿದ್ದರಾಮಯ್ಯ ಅಥವಾ ಡಿಕೆ ಶಿವಕುಮಾರ್ ನಡುವೆಯೇ ಕಾಂಪಿಟೇಷನ್ ಇದೆ. ಈ ಸಂಬಂಧ ಇದೀಗ ಡಿಕೆ ಶಿವಕುಮಾರ್ ಮಾತನಾಡಿದ್ದು, ಸಿದ್ದರಾಮಯ್ಯ ಅವರಿಗೆ ಆಲ್ ದಿ ಬೆಸ್ಟ್ ಹೇಳಿದ್ದಾರೆ.
ನಾನು ಪಕ್ಷದ ಒಂದು ಭಾಗವಾಗಿದ್ದೇನೆ ಅಷ್ಟೇ. ಊಹೆ ಮಾಡದೆ ಇದ್ದರೂ ತಾಯಿ ಮಗನಿಗೆ ಎಲ್ಲವನ್ನೂ ಕೊಡುತ್ತಾಳೆ. ಅವತ್ತು ಸೋನಿಯಾ ಗಾಂಧಿ ಅವರು ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಹೇಳಿ ಅಧ್ಯಕ್ಷ ಸ್ಥಾನ ನೀಡಿದ್ದರು. ಕೊಟ್ಟ ಮಾತಿನಂತೆ ಅಧಿಕಾರಕ್ಕೆ ತಂದಿದ್ದೇವೆ. ಚಾಚು ತಪ್ಪದೆ ಅದನ್ನು ಪಾಲಿಸಿ, ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇವೆ. ಮುಂದಿನ ಲೋಕಸಭಾ ಚುನಾವಣೆಯಲ್ಲೂ ಪಕ್ಷವನ್ನು ಅಧಿಕಾರಕ್ಕೆ ತರಬೇಕಾಗಿದೆ.
2024ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ 20 ಸೀಟುಗಳನ್ನು ಪಡೆದುಕೊಂಡು ಬರುವ ಕಡೆಗೆ ಗಮನ ಹರಿಸುತ್ತೇವೆ. ಇದನ್ನು ಚಾಲೆಂಜಿಂಗ್ ಆಗಿ ತೆಗೆದುಕೊಂಡಿದ್ದೇವೆ. ಯಾರನ್ನೂ ಬ್ಲಾಕ್ ಮೇಲ್ ಮಾಡುವವನು ನಾನಲ್ಲ. ನನ್ನಿಂದ ಆ ರೀತಿಯೆಲ್ಲಾ ಊಹಿಸಬೇಡಿ. ನನಗೆ ನನ್ನದೇ ಆದ ಅಸ್ತಿತ್ವವಿದೆ. ನಾನು ಟೀಕೆಗಳಿಗೆ ಹೆದರಿ ಪಲಾಯನ ಮಾಡುವುದಿಲ್ಲ ಎಂದಿದ್ದಾರೆ. ಇನ್ನು ಸಿದ್ದರಾಮಯ್ಯ ಅವರು ನನಗೆ ಶಾಸಕರ ಬೆಂಬಲವಿದೆ ಎಂದು ಹೇಳಿದ ಮಾತಿಗೆ ಆಲ್ ದಿ ಬೆಸ್ಟ್ ಹೇಳಿದ್ದಾರೆ.





GIPHY App Key not set. Please check settings