ಸುದ್ದಿಒನ್ : ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ಶುಭಮನ್ ಗಿಲ್ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.
ಐಸಿಸಿ ಬುಧವಾರ ಪ್ರಕಟಿಸಿದ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಗಿಲ್ ಅಗ್ರಸ್ಥಾನಕ್ಕೆ ತಲುಪಿದ್ದಾರೆ. ಗಿಲ್ ನಂ.1 ರ‌್ಯಾಂಕ್ ಅಲಂಕರಿಸಿದ್ದು ಇದೇ ಮೊದಲು.
ಕೆಲ ಸಮಯದಿಂದ ಅದ್ಭುತ ಪ್ರದರ್ಶನ ನೀಡುತ್ತಿರುವ ಗಿಲ್ ಪಾಕ್ ನಾಯಕ ಬಾಬರ್ ಅಜಮ್ ಅವರನ್ನು ಹಿಂದಕ್ಕೆ ತಳ್ಳಿಲ ಅಗ್ರಸ್ಥಾನಕ್ಕೇರಿದ್ದಾರೆ.
ಈಗ ನಡೆಯುತ್ತಿರುವ ಏಕದಿನ ವಿಶ್ವಕಪ್‌ನಲ್ಲೂ ಗಿಲ್ ಆಡುತ್ತಿದ್ದಾರೆ. ಜ್ವರದಿಂದ ಮೊದಲ ಮೂರು ಪಂದ್ಯಗಳಿಂದ ಹೊರಗುಳಿದಿದ್ದ ಈ ಯುವ ಆರಂಭಿಕ ಆಟಗಾರ, ನಂತರ ಪಂದ್ಯಗಳಿಗೆ ರೀ ಎಂಟ್ರಿ ಕೊಟ್ಟಿದ್ದರು. ಪ್ರಸ್ತುತ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಗಿಲ್ 830 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಬಾಬರ್ 824 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.
ಗಿಲ್ ಅವರದು ಅಪರೂಪದ ಸಾಧನೆ :
ಏಕದಿನದಲ್ಲಿ ವಿಶ್ವದ ನಂಬರ್ 1 ಬ್ಯಾಟ್ಸ್ ಮನ್ ಎನಿಸಿಕೊಂಡಿರುವ ಗಿಲ್ ಅಪರೂಪದ ಸಾಧನೆಯನ್ನು ತಮ್ಮ ಹೆಸರಿನಲ್ಲಿ ದಾಖಲಿಸಿದ್ದಾರೆ. ಶುಭ್‌ಮನ್ ಕಡಿಮೆ ಇನ್ನಿಂಗ್ಸ್‌ಗಳಲ್ಲಿ ನಂ.1 ರ‌್ಯಾಂಕ್ ತಲುಪಿದ ಎರಡನೇ ಭಾರತೀಯ ಆಟಗಾರ ಎನಿಸಿಕೊಂಡರು. ಗಿಲ್ ಈ ದಾಖಲೆಯನ್ನು ಕೇವಲ 41 ಇನ್ನಿಂಗ್ಸ್‌ಗಳಲ್ಲಿ ಸಾಧಿಸಿರುವುದು ಗಮನಾರ್ಹ.
ಈ ಅಪರೂಪದ ಸಾಧನೆ ಮಾಡಿದವರ ಪಟ್ಟಿಯಲ್ಲಿ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಇದ್ದಾರೆ. 2010ರಲ್ಲಿ ಏಕದಿನದಲ್ಲಿ ನಂ.1 ಬ್ಯಾಟ್ಸ್ ಮನ್ ಎನಿಸಿಕೊಂಡಿದ್ದ ಧೋನಿ ಕೇವಲ 38 ಇನ್ನಿಂಗ್ಸ್ ಗಳಲ್ಲಿ ಈ ಗೌರವ ಪಡೆದರು. ಅದೇ ರೀತಿ ಏಕದಿನದಲ್ಲಿ ಅಗ್ರಸ್ಥಾನಕ್ಕೇರಿದ ಭಾರತದ ನಾಲ್ಕನೇ ಆಟಗಾರ ಎಂಬ ಕೀರ್ತಿಗೆ ಗಿಲ್ ಪಾತ್ರರಾದರು. ಗಿಲ್‌ಗಿಂತ ಮೊದಲು ಸಚಿನ್ ತೆಂಡೂಲ್ಕರ್, ಧೋನಿ ಮತ್ತು ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದರು.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…