ಚಿತ್ರದುರ್ಗ : ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಪಾದಯಾತ್ರೆ ಇಂದು ಕೋಟೆನಾಡಿನಲ್ಲಿ ಸಂಚರಿಸಿದೆ. ಈ ಪಾದಯಾತ್ರೆಯಲ್ಲಿ ಭಾಗವಹಿಸಲು ಬಂದಿದ್ದ ವ್ಯಕ್ತಿಯೊಬ್ಬರು ಅಪಘಾತಕ್ಕೀಡಾಗಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. 55 ವರ್ಷದ ರಮೇಶ್ ಸಾವನ್ನಪ್ಪಿದ ವ್ಯಕ್ತಿ.
ಪಾದಯಾತ್ರೆ ಮುಗಿಸಿ ವಾಪಸ್ ತೆರಳುವಾಗ ರಮೇಶ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ಘಟನೆ ಹಿರಿಯೂರು ನಗರದ ಟಿಬಿ ಸರ್ಕಲ್ ಬಳಿ ಇರುವ ಕೋರ್ಟ್ ಬಳಿ ನಡೆದಿದೆ. ಮೃತ ರಮೇಶ್ ಅವರು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಉತ್ತರದಿಬ್ಬ ಗ್ರಾಮದವರು ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಹಿರಿಯೂರು ನಗರದ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ. ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.