Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕಕ್ಕೆ ದಾಖಲೆಯ 1,122 ಹೆಚ್ಚುವರಿ ವೈದ್ಯಕೀಯ ಸೀಟುಗಳು ಮಂಜೂರು!

---Advertisement---

ಸುದ್ದಿಒನ್,ಬೆಂಗಳೂರು,ಮೇ.17: ರಾಜ್ಯದ ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಕೇಂದ್ರ ಸರ್ಕಾರದಿಂದ ಭರಪೂರ ಕೊಡುಗೆ ಸಿಕ್ಕಿದೆ. ಕರ್ನಾಟಕಕ್ಕೆ ಒಟ್ಟು 1,122 ಹೆಚ್ಚುವರಿ ವೈದ್ಯಕೀಯ ಸೀಟುಗಳನ್ನು ಮಂಜೂರು ಮಾಡಲಾಗಿದ್ದು, ಇಷ್ಟು ದೊಡ್ಡ ಪ್ರಮಾಣದಲ್ಲಿ ರಾಜ್ಯಕ್ಕೆ ಸೀಟುಗಳು ಹಂಚಿಕೆಯಾಗಿರುವುದು ಇದೇ ಮೊದಲು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಶನಿವಾರ ವಿಕಾಸಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಹೆಚ್ಚುವರಿ ಸೀಟುಗಳು ಲಭ್ಯವಾಗಿರುವುದು ರಾಜ್ಯದಲ್ಲಿ ಹೊಸದಾಗಿ 10 ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವುದಕ್ಕೆ ಸಮನಾಗಿದೆ. ಮಂಜೂರಾಗಿರುವ ಸೀಟುಗಳಲ್ಲಿ ಬಹುಪಾಲು ಸೀಟುಗಳನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೇ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯಕ್ಕೆ ಕೇಂದ್ರ ಸರ್ಕಾರ ಹೆಚ್ಚುವರಿಯಾಗಿ 550 ಸ್ನಾತಕೋತ್ತರ ವೈದ್ಯಕೀಯ ಸೀಟುಗಳು ಮತ್ತು 572 ವೈದ್ಯಕೀಯ ಸೀಟುಗಳನ್ನು ಮಂಜೂರು ಮಾಡಲಾಗಿದ್ದು, ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಬಯಸುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಸಿಗಲಿದೆ. ಹೆಚ್ಚುವರಿಯಾಗಿ 1122 ಪಿಜಿ ಮತ್ತು ಯುಜಿ ವೈದ್ಯಕೀಯ ಸೀಟುಗಳನ್ನು ನೀಡುತ್ತಿದ್ದು, ಇವುಗಳಲ್ಲಿ ಬಹುಪಾಲನ್ನು ಕೊಪ್ಪಳ, ಶಿವಮೊಗ್ಗ, ಹುಬ್ಬಳ್ಳಿ, ಮಂಡ್ಯ, ಗದಗ, ಮಡಿಕೇರಿ, ಚಾಮರಾಜನಗರ, ಹಾವೇರಿ, ಚಿಕ್ಕಮಗಳೂರು ಜಿಲ್ಲೆಗಳ ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಹಂಚಿಕೆ ಮಾಡಲಾಗುವುದು. ಹೆಚ್ಚುವರಿ ವೈದ್ಯಕೀಯ ಸೀಟು ಹಂಚಿಕೆ ಮಾಡಿ ಮೂಲಸೌಕರ್ಯ ವೃದ್ಧಿಗೆ ಕೇಂದ್ರ ಸರ್ಕಾರ ಒಟ್ಟಾರೆ 1090 ಕೋಟಿ ರೂ. ಅನುದಾನ ನೀಡಲಿದೆ. ರಾಜ್ಯ ಸರ್ಕಾರ 600 ಕೋಟಿ ರೂ.ಗೂ ಹೆಚ್ಚಿನ ಅನುದಾನ ಕೊಡಲಿದೆ ಎಂದು ಹೇಳಿದ್ದಾರೆ.

Join WhatsApp

Join Now

Join Telegram

Join Now