ಚಿತ್ರದುರ್ಗ, ಸೆಪ್ಟೆಂಬರ್.29 : ಬೆಂಗಳೂರು ನಿವಾಸಿ ಜಿ.ಎಚ್.ಮನು (54) ಶುಕ್ರವಾರ ಅನಾರೋಗ್ಯದಿಂದ ದಾವಣಗೆರೆ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪತ್ನಿ ಪಲ್ಲವಿ, ತಂದೆ ರಾಜ್ಯಸಭೆ ಮಾಜಿ ಸದಸ್ಯ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಎಚ್.ಹನುಮಂತಪ್ಪ, ಅಣ್ಣ ಜಿಲ್ಲಾ ಕಾಂಗ್ರೆಸ್ ಹಿರಿಯ ಮುಖಂಡ ಜಿ.ಎಚ್.ಮೋಹನ್ ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ದಾವಣಗೆರೆಯಲ್ಲಿ ಶನಿವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.