ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ,(ಅಕ್ಟೋಬರ್28) : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು-ನುಡಿಯ ಹಿರಿಮೆ ಸಾರುವ ಕನ್ನಡ ಗೀತೆಗಳ “ಕೋಟಿ ಕಂಠ ಗಾಯನ” ಶುಕ್ರವಾರ ಜಿಲ್ಲೆಯಾದ್ಯಂತ 18 ಸ್ಥಳಗಳಲ್ಲಿ ಏಕಕಾಲದಲ್ಲಿ ಸಮೂಹ ಗೀತ ಗಾಯನ ನಡೆಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನನ್ನ ಹಾಡು ನನ್ನ ಹಾಡು ಶೀರ್ಷಿಕೆಯಡಿ ಜಿಲ್ಲಾ ಕೇಂದ್ರ, ತಾಲ್ಲೂಕು ಕೇಂದ್ರ, ಹೋಬಳಿ ಹಾಗೂ ಗ್ರಾಮಮಟ್ಟದಲ್ಲಿಯೂ ಕೋಟಿ ಕಂಠ ಗೀತ ಗಾಯನ ಅನುರಣಿಸಿತು.
ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ, ಚಿತ್ರದುರ್ಗ ಕೋಟೆ ಮುಂಭಾಗ, ಚಿತ್ರದುರ್ಗದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು, ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು, ಎಸ್‍ಆರ್‍ಎಸ್ ಕಾಲೇಜು, ಎಸ್‍ಜೆಎಂಐಟಿ ಕಾಲೇಜು, ಅರವಿಂದ ಗಾರ್ಮೆಂಟ್ಸ್, ಸರ್ಕಾರಿ ವಿಜ್ಞಾನ ಕಾಲೇಜು, ಬಾಪೂಜಿ ವಿದ್ಯಾಸಂಸ್ಥೆ, ಹೊಸದುರ್ಗದ ಸರ್ಕಾರಿ ಪದವಿಪೂರ್ವ ಕಾಲೇಜು, ಎಸ್.ನಿಜಲಿಂಗಪ್ಪ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ, ಮೊಳಕಾಲ್ಮುರಿನ ಸರ್ಕಾರಿ ಪದವಿಪೂರ್ವ ಕಾಲೇಜು, ಹಿರಿಯೂರು ಸರ್ಕಾರಿ ಪದವಿಪೂರ್ವ ಕಾಲೇಜು, ಹೊಳಲ್ಕೆರೆ ಸರ್ಕಾರಿ ಪದವಿಪೂರ್ವ ಕಾಲೇಜು, ಚಳ್ಳಕೆರೆ ಸರ್ಕಾರಿ ಪದವಿಪೂರ್ವ ಕಾಲೇಜು, ತಳಕು ಸರ್ಕಾರಿ ಪದವಿಪೂರ್ವ ಕಾಲೇಜು, ಚಿತ್ರದುರ್ಗ ತಾಲ್ಲೂಕಿನ ಗುಡ್ಡದರಂಗವ್ವನಹಳ್ಳಿ ದಾವಣಗೆರೆ ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಅಧ್ಯಯನ ಕೇಂದ್ರ, ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನ ಸೇರಿದಂತೆ ಜಿಲ್ಲೆಯಾದ್ಯಂತ 18 ಸ್ಥಳಗಳಲ್ಲಿ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ಸಾಮೂಹಿಕವಾಗಿ ಬೆಳಿಗ್ಗೆ 11ಕ್ಕೆ ಏಕಕಾಲದಲ್ಲಿ ಕೋಟಿ ಕಂಠ ಗೀತಗಾಯನ ಮೊಳಗಿತು.
ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮದಲ್ಲಿ ನಾಡು-ನುಡಿಯ ಶ್ರೇಷ್ಟತೆ ಸಾರುವ ಆರು ಕನ್ನಡ ಗೀತೆಗಳ ಗಾಯನ ಮಾಡಲಾಯಿತು. ಮೊದಲಿಗೆ ನಾಡಗೀತೆ-ಜಯ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ, ಹುಯಿಲಗೋಳ ನಾರಾಯಣರಾಯರ “ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು”, ರಾಷ್ಟ್ರಕವಿ ಕುವೆಂಪು ಅವರ “ಬಾರಿಸು ಕನ್ನಡ ಡಿಂಡಿಮವ”, ಡಾ.ಡಿ.ಎಸ್.ಕರ್ಕಿಯವರ “ಹಚ್ಚೇವು ಕನ್ನಡದ ದೀಪ”, ನಾಡೋಜ ಡಾ.ಚೆನ್ನವೀರ ಕಣವಿಯವರ “ವಿಶ್ವವಿನೂತನ ವಿದ್ಯಾಚೇತನ” ಡಾ.ಹಂಸಲೇಖರವರ “ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು” ಎಂಬ ನಾಡು-ನುಡಿಯ ಅಭಿಮಾನದ ಗೀತೆಗಳನ್ನು ಹಾಡಿ ಸಂಭ್ರಮಿಸಲಾಯಿತು.
ಏಳು ಸುತ್ತಿನ ಕೋಟೆಯಲ್ಲಿ ಮೊಳಗಿದ ಕನ್ನಡದ ಕಹಳೆ
ಕನ್ನಡ ಪರಂಪರೆ ಕಾಪಾಡುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು.