Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ आध्यात्मिक अन्य

---Advertisement---

ಪತ್ನಿ ಅನಾರೋಗ್ಯ : ಅಕ್ಕಿಗಾಗಿ ದೆಹಲಿಗೆ ಹೊರಟಿದ್ದ ಸಿಎಂ ಪ್ರಯಾಣದಲ್ಲಿ ತುಸು ಬದಲಾವಣೆ

---Advertisement---

 

 

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡುತ್ತಿದ್ದಾರೆ. ನಿನ್ನೆ ರಾತ್ರಿಯೇ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸಾಮಾನ್ಯ ಜ್ವರದಿಂದ ಪಾರ್ವತಿ ಅವರು ಬಳಲುತ್ತಿದ್ದರು. ಮಣಿಪಾಲ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದ್ದು, ಮಗ ಯತೀಂದ್ರ ಸಿದ್ದರಾಮಯ್ಯ ಅವರು ತಾಯಿಯ ಜೊತೆಗೇನೆ ಇದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಕೂಡ ಪತ್ನಿಯ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಹೋಗಿದ್ದಾರೆ.

ಅಕ್ಕಿ ವಿಚಾರವಾಗಿ ಮಾತುಕತೆಯಾಡಲು ಇಂದು ಸಿಎಂ ಸಿದ್ದರಾಮಯ್ಯ ಅವರು ದೆಹಲಿಗೆ ಹೊರಟಿದ್ದಾರೆ. ಇಂದು ಅಕ್ಕಿ ವಿಚಾರಕ್ಕೆ ಒಂದು ತಾರ್ಕಿಕ ಅಂತ್ಯ ಕಾಣಲಿದೆ. ಹೆಂಡತಿಯ ಅನಾರೋಗ್ಯದ ನಡುವೆ ಕೊಂಚ ತಡವಾಗಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

Join WhatsApp

Join Now

Join Telegram

Join Now

Leave a Comment