Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಲೆಮಾರಿ ಸಮುದಾಯಕ್ಕೆ ಕಾಡುಗೊಲ್ಲ, ಹಟ್ಟಿಗೊಲ್ಲರ ಸೇರ್ಪಡೆಗಾಗಿ ಅಧ್ಯಯನ : ಜಯಪ್ರಕಾಶ್ ಹೆಗ್ಡೆ

Facebook
Twitter
Telegram
WhatsApp

ಚಿತ್ರದುರ್ಗ, (ಅಕ್ಟೋಬರ್.28) : ಜಿಲ್ಲೆಯಲ್ಲಿನ ಕಾಡುಗೊಲ್ಲ, ಹಟ್ಟಿಗೊಲ್ಲ ಸಮುದಾಯಗಳು ಅಲೆಮಾರಿ ಸಮುದಾಯಗಳಾಗಿದ್ದು, ಸರ್ಕಾರದ ಸೌಲಭ್ಯಗಳಿಂದ ವಂಚಿತವಾಗಿವೆ. ಈ ನಿಟ್ಟಿನಲ್ಲಿ ಕಾಡುಗೊಲ್ಲ, ಹಟ್ಟಿಗೊಲ್ಲ ಸಮುದಾಯಗಳನ್ನು ಮುಖ್ಯವಾಹಿನಿಗೆ ತರುವುದು ಹಾಗೂ ಕಾಡುಗೊಲ್ಲ, ಹಟ್ಟಿ ಗೊಲ್ಲರನ್ನು ಅಲೆಸಮುದಾಯಕ್ಕೆ ಸೇರ್ಪಡೆಗೊಳಿಸುವ ಸಲುವಾಗಿ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಅಧ್ಯಯನ ಮಾಡಲಾಗುತ್ತಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾಡುಗೊಲ್ಲ, ಹಟ್ಟಿಗೊಲ್ಲ ಸಮುದಾಯಗಳ ಅಧ್ಯಯನ ಸಲುವಾಗಿ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿರುವ ಗೊಲ್ಲರಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಕೂಡಲೇ ಅಗತ್ಯಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಗೋಮಾಳಗಳನ್ನು ಸರ್ಕಾರದ ವಿವಿಧ ಯೋಜನೆಗಳಿಗೆ ಗ್ರ್ಯಾಂಟ್ ಮಾಡಲಾಗುತ್ತಿದ್ದು, ಇದರಿಂದಾಗಿ ಕುರಿಗಳಿಗೆ ಮೇವಿನ ತೀವ್ರ ಅಭಾವ ಉಂಟಾಗುತ್ತಿದ್ದು, ಹಾಗಾಗಿ ಗೋಮಾಳ ಸಂರಕ್ಷಣೆಗಾಗಿ ಕ್ರಮವಹಿಸಬೇಕು ಎಂದು ಸಮುದಾಯದ ಮುಖಂಡರು ಅಧ್ಯಕ್ಷರಿಗೆ ಸಭೆಯಲ್ಲಿ ಮನವಿ ಮಾಡಿದರು. ಗೋಮಾಳಗಳ ಸಂರಕ್ಷಣೆಗೆ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಸೂಚನೆ ನೀಡಿದರು.

ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ಕಾಡುಗೊಲ್ಲ, ಹಟ್ಟಿಗೊಲ್ಲ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯಗಳಲ್ಲಿ ಸಾಕಷ್ಟು ಪ್ರವೇಶಾವಕಾಶಗಳು ಸಿಗುತ್ತಿಲ್ಲ. ಜಿಲ್ಲೆಯಲ್ಲಿ ಒಟ್ಟು ಮೂರು ಅಲೆಮಾರಿ ವಿದ್ಯಾರ್ಥಿನಿಲಯಗಳಿದ್ದು, ಇದರ ಜೊತೆಗೆ ಹೆಚ್ಚುವರಿಯಾಗಿ ಎರಡು ಪ್ರತ್ಯೇಕ ಅಲೆಮಾರಿ ವಿದ್ಯಾರ್ಥಿ ನಿಲಯಗಳನ್ನು ಮಂಜೂರಾತಿ ಮಾಡಬೇಕು ಎಂದು ಸಮುದಾಯದ ಮುಖಂಡರಾದ ಶಿವುಯಾದವ್ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷರು ಅಲೆಮಾರಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಸತಿ ನಿಲಯಗಳ ಸ್ಥಾಪನೆಗೆ ಸರ್ಕಾರದ ಹಂತದಲ್ಲಿ ಚರ್ಚಿಸಿ ಮಂಜೂರಾತಿ ಮಾಡಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ಹೊಳಲ್ಕೆರೆ ತಾಲ್ಲೂಕಿನ ಹೆಚ್.ಡಿ.ಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ನಂದನಹೊಸೂರು ಗೊಲ್ಲರಹಟ್ಟಿಗೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರು ಭೇಟಿ ನೀಡಿ, ಸಮುದಾಯದ ಕುರಿತು ಅಧ್ಯಯನ ನಡೆಸಿದರು.

ಸಭೆಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರಾದ ಕಲ್ಯಾಣ್ ಕುಮಾರ್, ಅರುಣ್ ಕುಮಾರ್, ರಾಜಶೇಖರ್, ಸುವರ್ಣ ಕುಮಾರ್,  ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವಿನ್ ಸೇರಿದಂತೆ ಕಾಡುಗೊಲ್ಲ, ಹಟ್ಟಿಗೊಲ್ಲ ಸಮುದಾಯದ ಮುಖಂಡರಾದ ಶಿವುಯಾದವ್, ಮೀಸೆ ಮಹಲಿಂಗಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

error: Content is protected !!