Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆಯಲ್ಲಿ ಭೀಕರ ಅಪಘಾತ : ಸಿರಿಗೆರೆ ವೈದ್ಯ ಡಾ.ತಿಮ್ಮೇಗೌಡ ಸಾವು

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಸ್ಥಳದಲ್ಲೇ ಸಾವನಪ್ಪಿದ್ದಾರೆ.

ದಾವಣಗೆರೆ ಹೊರವಲಯದ ಬಾಡ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಅಪಘಾತ ಶನಿವಾರ ರಾತ್ರಿ ಸುಮಾರು 12 : 30 ರ ವೇಳೆಯಲ್ಲಿ ಸಂಭವಿಸಿದೆ. ಮೃತರನ್ನು ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಡಾ.ತಿಮ್ಮೇಗೌಡ (34) ಎಂದು ಗುರುತಿಸಲಾಗಿದೆ. ಚಿತ್ರದುರ್ಗ ತಾಲೂಕಿನ ಸಿರಿಗೆರೆ ಸರ್ಕಾರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದರು. ದಾವಣಗೆರೆಯಲ್ಲಿ ನಡೆದ ಸಮಾವೇಶದಲ್ಲಿ ಪಾಲ್ಗೊಂಡು ವಾಪಸ್ಸು ಬರುತ್ತಿರುವಾಗ ಮಧ್ಯ ರಾತ್ರಿಯಲ್ಲಿ ಈ ಅಪಘಾತ ಸಂಭವಿಸಿದೆ. ಅವರು ತಂದೆ, ತಾಯಿ, ಪತ್ನಿ, ಪುತ್ರಿ ಹಾಗೂ ಅಪಾರ ಬಂದು ಬಳಗದವರನ್ನ ಅಗಲಿದ್ದಾರೆ.

ದಾವಣಗೆರೆಯಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ಶ್ವಾಸಕೋಶ ತಜ್ಞ ಸಮಾವೇಶದಲ್ಲಿ ಭಾಗಿಯಾಗಿ ವಾಪಸ್ ಬರುತ್ತಿದ್ದ ವೇಳೆ ವೇಗವಾಗಿ ಚಲಿಸಿ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ವೈದ್ಯರ ಕಾರಿನ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾದೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment