ಬೆಂಗಳೂರು: ಸೈಬರ್ ವಂಚಕರು ಹೊಸ ಹೊಸ ತಂತ್ರಗಳನ್ನು ಬಳಸಿ ಜನರ ಬ್ಯಾಂಕ್ ಖಾತೆಗಳನ್ನು ಖಾಲಿ ಮಾಡುತ್ತಿರುವ ಘಟನೆಗಳು ಹೆಚ್ಚುತ್ತಿವೆ. ಇದೀಗ ವಾಟ್ಸ್ಆಪ್‌ನಲ್ಲಿ ಬಂದ ಮದುವೆ ಆಹ್ವಾನದ ಹೆಸರಿನ APK ಫೈಲ್ ತೆರೆದ ಸರ್ಕಾರಿ ಅಧಿಕಾರಿಯೊಬ್ಬರು ಬರೋಬ್ಬರಿ ₹9.96 ಲಕ್ಷ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಮೇಶ್ ಬಾಬು ಅವರಿಗೆ ಜುಲೈ 14ರಂದು ಸಂಜೆ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ವಾಟ್ಸ್ಆಪ್‌ನಲ್ಲಿ ಮದುವೆ ಆಹ್ವಾನದ ಸಂದೇಶ ಬಂದಿದೆ. ಅದು ಪರಿಚಿತರದ್ದೇ ಇರಬಹುದು ಎಂದು ಭಾವಿಸಿದ ಅವರು ಫೈಲ್ ತೆರೆದಿದ್ದಾರೆ.
ಫೈಲ್ ಓಪನ್ ಮಾಡಿದ ಬಳಿಕ ಅದು APK (Android Package File) ಎಂಬುದು ತಿಳಿದರೂ ಹೆಚ್ಚಿನ ಗಮನ ನೀಡಲಿಲ್ಲ. ಆದರೆ ಕೆಲವೇ ನಿಮಿಷಗಳಲ್ಲಿ ಅವರ ಬ್ಯಾಂಕ್ ಖಾತೆಯಿಂದ ಹಣ ಕಡಿತವಾಗುತ್ತಿರುವ ಎಸ್‌ಎಂಎಸ್‌ಗಳು ಬರತೊಡಗಿದವು. ಖಾತೆ ಪರಿಶೀಲಿಸಿದಾಗ ವಿವಿಧ ಹಂತಗಳಲ್ಲಿ ಒಟ್ಟು ₹9.96 ಲಕ್ಷ ವಂಚಕರ ಖಾತೆಗೆ ವರ್ಗಾವಣೆಯಾಗಿರುವುದು ಗೊತ್ತಾಗಿದೆ.ತಕ್ಷಣ ಅವರು ಉತ್ತರ ವಿಭಾಗದ ಸೈಬರ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
APK ಫೈಲ್ ಎಂದರೇನು?
APK (Android Package File) ಎನ್ನುವುದು ಆಂಡ್ರಾಯ್ಡ್ ಮೊಬೈಲ್‌ನಲ್ಲಿ ಅಪ್ಲಿಕೇಶನ್‌ಗಳನ್ನು ಇನ್‌ಸ್ಟಾಲ್ ಮಾಡಲು ಬಳಸುವ ಫೈಲ್ ರೂಪವಾಗಿದೆ. ಗೂಗಲ್ ಪ್ಲೇ ಸ್ಟೋರ್‌ನ ಹೊರತಾಗಿ ಇಂಟರ್ನೆಟ್‌ನಿಂದ ಆ್ಯಪ್‌ಗಳನ್ನು ಇನ್‌ಸ್ಟಾಲ್ ಮಾಡಲು ಇದನ್ನು ಬಳಸಲಾಗುತ್ತದೆ. ಆದರೆ ಇದೇ ಫೈಲ್‌ಗಳನ್ನು ಸೈಬರ್ ವಂಚಕರು ದುರುಪಯೋಗಪಡಿಸಿಕೊಂಡು ಮೊಬೈಲ್‌ಗೆ ದುಷ್ಪರಿಣಾಮಕಾರಿ ತಂತ್ರಾಂಶ (Malware) ಸೇರಿಸಿ ಬ್ಯಾಂಕಿಂಗ್ ಮಾಹಿತಿ ಕದಿಯುವ ಸಾಧ್ಯತೆ ಇದೆ.
ತಜ್ಞರ ಪ್ರಕಾರ, ಅಪರಿಚಿತ ಸಂಖ್ಯೆಯಿಂದ ಬರುವ APK ಫೈಲ್‌ಗಳು, ಅನುಮಾನಾಸ್ಪದ ಲಿಂಕ್‌ಗಳು ಅಥವಾ ಅಟ್ಯಾಚ್‌ಮೆಂಟ್‌ಗಳನ್ನು ಯಾವುದೇ ಕಾರಣಕ್ಕೂ ಕ್ಲಿಕ್ ಮಾಡಬಾರದು. ಇಂತಹ ಸಂದೇಶಗಳನ್ನು ತಕ್ಷಣ ಅಳಿಸಿ, ಅಗತ್ಯವಿದ್ದರೆ ವರದಿ ಮಾಡುವುದೇ ಸುರಕ್ಷಿತ ಕ್ರಮವಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








