Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಸಕೋಟೆಯ ದೇವಾಲಯವೊಂದರ ಪ್ರಸಾದ ಸೇವಿಸಿ ಮಹಿಳೆ ಸಾವು, ಹಲವರು ಅಸ್ವಸ್ಥ..!

Facebook
Twitter
Telegram
WhatsApp

ಹನುಮ ಜಯಂತಿಯ ಹಿನ್ನೆಲೆ ದೇವಾಲಯದಲ್ಲಿ ನೀಡಿದ ಪ್ರಸಾದ ಸೇವಿಸಿ, ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಹೊಸಕೋಟೆ ನಗರದಲ್ಲಿ ನಡೆದಿದೆ. ವಾಂತಿ-ಬೇಧಿಯಿಂದ ಹಲವರು ಆಸ್ಪತ್ರೆಯ ಪಾಲಾಗಿದ್ದಾರೆ. ಈ ಘಟನೆಯಲ್ಲಿ ಸಿದ್ದಲಿಂಗಮ್ಮ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ.

ನಿನ್ನೆ ಹನುಮಜಯಂತಿ ಎಲ್ಲೆಡೆ ಸಂಭ್ರಮದಿಂದ ನಡೆದಿದೆ. ಎಲ್ಲೆಡೆ ದೇವಸ್ಥಾನಗಳಿಗೆ ಅದ್ದೂರಿ ಅಲಂಕಾರ ಮಾಡಿ, ದೇವರಿಗೆ ವಿಶೇಷ ಪೂಜೆ ಮಾಡಿದ್ದಾರೆ. ದೇವಸ್ಥಾನಕ್ಕೆ ಬಂದ ಭಕ್ತರಿಗೆ ಪ್ರಸಾದವನ್ನು ಹಂಚಿದ್ದಾರೆ. ನಿನ್ನೆ ವೆಂಕಟರಮಣಸ್ವಾಮಿ ದೇವಸ್ಥಾನ, ಊರು ಬಾಗಿಲು ಆಂಜನೇಯ ಸ್ವಾಮಿ, ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಭಕ್ತರು ಭರ್ಜರಿಯಾಗಿ ಸೇರಿದ್ದರು. ಪೂಜೆ ನೆರವೇರಿಸಿ, ದೇವರಿಗೆ ನಮಸ್ಕರಿಸಿ, ದೇವರ ಪ್ರಸಾದವನ್ನು ಸಾವಿರಾರು ಮಂದಿ ಸೇವಿಸಿದ್ದರು.

ದೇವಾಲಯಗಳಲ್ಲಿ ಲಡ್ಡು, ಪಾಯಸ, ಪುಳಿಯೊಗರೆಯನ್ನು ತಯಾರು ಮಾಡಲಾಗಿತ್ತು. ಬಂದ ಭಕ್ತರಿಗೆ ಅದನ್ನೇ ಪ್ರಸಾದವಾಗಿ ನೀಡಲಾಗಿತ್ತು. ಅದನ್ನು ತಿಂದ ಮೇಲೆ ಭಕ್ತರಲ್ಲಿ ವಾಂತಿ, ಬೇಧಿ ಶುರುವಾಗಿದೆ. ಇಂದು ಬೆಳಗ್ಗೆಯೇ ತೀವ್ರ ವಾಂತಿ – ಬೇಧಿ ಕಾಣಿಸಿಕೊಂಡಿದ್ದು, ತಕ್ಷಣ ಅಸ್ವಸ್ಥಗೊಂಡವರನ್ನು ಹತ್ತಿರದ ಆಸ್ಪತ್ರೆಗಳಿಗೆ ಅಡ್ಮಿಟ್ ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಿದ್ಧಲಿಂಗಮ್ಮ ಸಾವನ್ನಪ್ಪಿದ್ದಾರೆ. ಇನ್ನುಳಿದವರನ್ನು ಕೋಲಾರ, ಹೊಸಕೋಟೆ ಮತ್ತು ಬೆಂಗಳೂರಿನ ಆಸ್ಪತ್ರೆಗಳಿಗೆ ಸೇರಿಸಿ, ಚಿಕಿತ್ಸೆ‌ಕೊಡಿಸಲಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!