Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೂಡಾ ಹಗರಣದಲ್ಲಿ ಹೋರಾಟಕ್ಕಿಳಿದಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ಮಹಿಳೆ ದೂರು..!

---Advertisement---

 

ಮೈಸೂರು: ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ದೂರು ನೀಡಿ, ಹೋರಾಟಕ್ಕೆ ಇಳಿದಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ಇದೀಗ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಮಹಿಳೆಯ ದೂರಿನ ಆಧಾರದ ಮೇಲೆ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ನೇಹಮಯಿ ಕೃಷ್ಣ ಅವರು ತನ್ನ ಮೇಲೆ ಅಟ್ಯಾಕ್ ಮಾಡಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.

ಮಹಿಳೆ ನೀಡಿದ ದೂರಿನಲ್ಲಿ, ನನ್ನ ಗಂಡ ಹಾರ್ಟ್ ಅಟ್ಯಾಕ್ ನಿಂದ ನಿಧನ ಹೊಂದಿದ್ದಾರೆ. ಡೆತ್ ಬೆನಿಫಿಸರಿ ಹಾಣ ಹಾಗೂ ನನ್ನ ಒಡವೆಗಳನ್ನು ಪಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್ ನಲ್ಲಿ ಕೇಸ್ ನಡೆಯುತ್ತಿದೆ. 18/7/2024 ರಂದು ಕೋರ್ಟ್ ಮುಗಿಸಿಕೊಂಡು ನಾನು ಮತ್ತು ನನ್ನ ತಾಯಿ ಬರುತ್ತಿದ್ದವು. ನನ್ನ ಅತ್ತೆ, ಮಾವ, ಅತ್ತೆ ಸಹೋದರನ ಪರವಾಗಿ ಸ್ನೇಹಮಯಿ ಕೃಷ್ಣ ಕಿರುಕುಳ ನೀಡಿದ್ದಾರೆ. ನನ್ನ ಹಿಡಿದು ಎಳೆದಾಡಿ, ನನಗೆ, ನನ್ನ ತಾಯಿಗೆ ಜೀವ ಬೆದರಿಕೆ ಹಾಕಿದ್ದಾರಲ್ಲದೆ, ಕೆಟ್ಟ ಪದಗಳಿಂದ ನಿಂದಿಸಿದ್ದಾರೆ ಎಂದು ಲಾವಣ್ಯ ಎಂಬ ಮಹಿಳೆ ದೂರು ನೀಡಿದ್ದಾರೆ.

ಈ ದೂರಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸ್ನೇಹಮಯಿ ಕೃಷ್ಣ, ಆ ಮಹಿಳೆ ಯಾರೆಂಬುದೇ ನನಗೆ ಗೊತ್ತಿಲ್ಲ. ನನ್ನ ಮೇಲಿನ ಆರೋಪ ಸುಳ್ಳು. ನನ್ನ ವಿರುದ್ಧ ಹಲವರು ಷಡ್ಯಂತ್ರ ಮಾಡುತ್ತಿದ್ದಾರೆ. ನಾನು ಜೈಲಿಗೆ ಹೋದರು ಸರಿ, ಹೋರಾಟ‌ ನಿಲ್ಲಿಸಲ್ಲ. ಅಲ್ಲಿಂದಾನೇ ಹೋರಾಟ‌ ಮಾಡುತ್ತೇನೆ. ಆ ದಿನ ನಾನು ಮೈಸೂರಿನಲ್ಲಿಯೇ ಇದ್ದೆ. ಬೇಕಾದರೆ ಟವರ್ ಲೊಕೇಶನ್, ಸಿಸಿಟಿವಿ ಎಲ್ಲವನ್ನು ಪರಿಶೀಲನೆ ಮಾಡಲಿ. ಮೂಡಾ ಹಗರಣದಲ್ಲಿ ಭಾಗಿಯಾಗಿರುವವರೆಲ್ಲಾ ಒಟ್ಟಿಗೆ ಸೇರಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...