ಬೆಂಗಳೂರು: ಇತ್ತಿಚಿನ ದಿನಗಳಲ್ಲಿ ಆನ್ಲೈನ್ ನಲ್ಲಿ ಲೋನ್ ನೀಡುವ ಆ್ಯಪ್ ಗಳು ಹೆಚ್ಚಾಗಿವೆ. ಬಹಳ ಸುಲಭವಾಗಿ ಸಿಗುತ್ತೆ ಎಂಬ ಕಾರಣಕ್ಕೆ ಜನ ಕೂಡ ಆನ್ಲೈನ್ ಲೋನ್ ಗಳ ಮೊರೆ ಹೋಗುತ್ತಾರೆ. ಇದೀಗ ಅಂತ ಲೋನ್ ಗಳಿಂದಾಗಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಯಲಹಂಕದಲ್ಲಿ ಈ ಘಟನೆ ಬೆಳಕಿಗೆ ಬಂದಿದ್ದು, 22 ವರ್ಷದ ತೇಜಸ್ ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ.
ತೇಜಸ್ ಯಲಹಂಕದ ನಿಟ್ಟೆ ಮೀನಾಕ್ಷಿ ಕಾಲೇಜಿನಲ್ಲಿ ಆರನೇ ಸೆಮಿಸ್ಟರ್ ನಲ್ಲಿ ಓದುತ್ತಿದ್ದರು. ಮೆಕ್ಯಾನಿಕಲ್ ವಿಭಾಗದಲ್ಲಿ ಟಾಪರ್ ಆಗಿದ್ದರು. ಆದರೆ ಮಹೇಶ್ ಎಂಬಾತ ಮಾಡಿದ ಆನ್ಲೈನ್ ಸಾಲದ ಸುಳಿಗೆ ಸಿಲುಕಿ, ಜೀವವನ್ನೇ ಕಳೆದುಕೊಂಡಿದ್ದಾನೆ. ತೇಜಸ್ ಸ್ಲೈಲ್ಸ್ ಪೇ, ಕಿಸಾತ್ ಹಾಗೂ ಕೋಟಕ್ ಮಹೀಂದ್ರಾ ಮೂಲಕ ಲೋನ್ ಪಡೆದುಕೊಂಡಿದ್ದನಂತೆ. ಆದರೆ ಕಳೆದ ಒಂದು ವರ್ಷದಿಂದ ಸ್ನೇಹಿತ ಮಹೇಶ್ ಇಎಂಐ ಕಟ್ಟಿರಲಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಾಲ ಮರು ಪಾವತಿ ಮಾಡುವಂತೆ ಸಿಬ್ಬಂದಿ ತೇಜಸ್ ಹಿಂದೆ ಬಿದ್ದಿದ್ದರಂತೆ.
ಸಾಲ ಕೊಟ್ಟವರ ಟಾರ್ಚರ್ ಕರೆಗೆ ನೊಂದು, ನಿನ್ನೆ ಸಂಜೆ ಆತಹತ್ಯೆ ಮಾಡಿಕೊಂಡಿದ್ದಾನೆ. ಡೆತ್ ನೋಟ್ ಬರೆದಿಟ್ಟು, ವೇಲಿನಿಂದ ನೇಣು ಬಿಗಿದುಕೊಂಡು, ಆತ್ಮಹತ್ಯೆಗೆ ಶರಣಾಗಿದ್ದಾನೆ. ಕುಟುಂಬಸ್ಥರು ಕಣ್ಣೀರಲ್ಲಿ ಮುಳುಗಿದ್ದಾರೆ.