Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯೂರಿಯಾ ರಸಗೊಬ್ಬರ ಖರೀದಿಗೆ ಆಧಾರ್ ಕಾರ್ಡ್  ಅಥವಾ ಎಫ್.ಐ.ಡಿ (FID) ಕಡ್ಡಾಯ

---Advertisement---

 

 

ದಾವಣಗೆರೆ, ಏಪ್ರಿಲ್ 08: ಮುಂಗಾರು ಹಂಗಾಮಿನಲ್ಲಿ ರೈತರಿಗೆ ರಸಗೊಬ್ಬರ ವಿತರಣೆಯನ್ನು ಸುಗಮಗೊಳಿಸಲು ಹಾಗೂ ಕಾಳಸಂತೆ ಮಾರಾಟವನ್ನು ತಡೆಗಟ್ಟಲು ಕೃಷಿ ಇಲಾಖೆಯು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರ ಖರೀದಿಸುವಾಗ ಆಧಾರ್ ಕಾರ್ಡ್ ಅಥವಾ ರೈತ ಗುರುತಿನ ಸಂಖ್ಯೆ (FID) ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ.

 

2026-27ನೇ ಸಾಲಿನಿಂದ ರಸಗೊಬ್ಬರ ಮಾರಾಟದ ಮೇಲೆ ನಿಗಾ ಇರಿಸಲು ಕೃಷಿ ಇಲಾಖೆಯು ವಿಶೇಷ ಆಪ್ ಬಿಡುಗಡೆ ಮಾಡಿದೆ. ಚಿಲ್ಲರೆ ಮಾರಾಟಗಾರರು ಈ ಆಪ್ ಮೂಲಕವೇ ಆಧಾರ್/FID ದಾಖಲಿಸಿ ಗೊಬ್ಬರ ವಿತರಿಸಬೇಕು. FID ಇಲ್ಲದ ರೈತರು ತಕ್ಷಣವೇ ತಮ್ಮ ಪಹಣಿ (RTC), ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಬುಕ್ ದಾಖಲೆಗಳೊಂದಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ, ಗ್ರಾಮ ಒನ್ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ FID ನೋಂದಾಯಿಸಿಕೊಳ್ಳಬೇಕು. ರೈತರು ತಮ್ಮ FID ಯಲ್ಲಿ ಜಮೀನಿನ ವಿಸ್ತೀರ್ಣ ಮತ್ತು ಸರ್ವೇ ನಂಬರ್‌ಗಳನ್ನು ಕಡ್ಡಾಯವಾಗಿ ನಮೂದಿಸಬೇಕು. ಭೂಮಿಯ ವಿಸ್ತೀರ್ಣಕ್ಕೆ ಅನುಗುಣವಾಗಿಯೇ ರಸಗೊಬ್ಬರವನ್ನು ವಿತರಿಸಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...