Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಧಾರ್ ಕೇವಲ ಗುರುತಿನ ಚೀಟಿಯಷ್ಟೇ, ಪೌರತ್ವದ ಪುರಾವೆಯಲ್ಲ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

---Advertisement---

ದೆಹಲಿ.ಜೂನ್.16: ಆಧಾರ್ ಕಾರ್ಡ್ ಗಳನ್ನು ಪೌರತ್ವ, ನಿವಾಸ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿರುವುದನ್ನು ತಡೆಯಬೇಕು ಮತ್ತು ಅದರ ಬಳಕೆಯನ್ನು ಕೇವಲ ವೈಯಕ್ತಿಕ ಗುರುತು ದೃಢೀಕರಣಕ್ಕೆ ಮಾತ್ರ ಸೀಮಿತಗೊಳಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ ಸರ್ಕಾರ ಹಾಗೂ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ಜಾರಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ವಿ. ಮೋಹನಾ ಅವರನ್ನೊಳಗೊಂಡ ನ್ಯಾಯಪೀಠವು, ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಈ ಆದೇಶ ನೀಡಿದೆ. ಅಲ್ಲದೆ, ಇದೇ ವಿಷಯಕ್ಕೆ ಸಂಬಂಧಿಸಿದ ಇತರೆ ಬಾಕಿ ಇರುವ ಪ್ರಕರಣಗಳೊಂದಿಗೆ ಈ ಅರ್ಜಿಯನ್ನೂ ಜೋಡಿಸಿದೆ.

ಆಧಾರ್ ಕಾರ್ಡ್ ಅನ್ನು ಕೇವಲ ಗುರುತಿನ ಪುರಾವೆಯಾಗಿ ಬಳಸಬೇಕೇ ಹೊರತು ಪೌರತ್ವ, ಮೂಲ ನಿವಾಸಿ (ಡೊಮಿಸೈಲ್), ವಿಳಾಸ ಅಥವಾ ಜನ್ಮ ದಿನಾಂಕದ ಅಧಿಕೃತ ದಾಖಲೆಯಾಗಿ ಬಳಸಬಾರದು ಎಂದು ಕೇಂದ್ರ ಸರ್ಕಾರ, ರಾಜ್ಯಗಳು ಮತ್ತು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ಹೊಸ ಮತದಾರರ ನೋಂದಣಿ ಅರ್ಜಿಯಲ್ಲಿ (ಫಾರ್ಮ್-6) ಆಧಾರ್ ಅನ್ನು ಜನ್ಮ ದಿನಾಂಕ ಮತ್ತು ವಾಸಸ್ಥಳದ ಪುರಾವೆಯಾಗಿ ಸ್ವೀಕರಿಸುವುದು ಆಧಾರ್ ಕಾಯ್ದೆ 2016ರ ಸೆಕ್ಷನ್ 9, ಜನಪ್ರತಿನಿಧಿ ಕಾಯ್ದೆ 1950ರ ಸೆಕ್ಷನ್ 23(4) ಮತ್ತು ಸಂವಿಧಾನದ ವಿಧಿ 14 ರ ಉಲ್ಲಂಘನೆಯಾಗಿದೆ ಎಂದು ಅರ್ಜಿದಾರರ ಪರ ವಕೀಲ ಅಶ್ವಾನಿ ದುಬೆ ವಾದಿಸಿದ್ದಾರೆ.

ಆಧಾರ್ ಪೌರತ್ವ ಅಥವಾ ನಿವಾಸದ ಪುರಾವೆಯಲ್ಲ ಎಂದು ಆಧಾರ್ ಕಾಯ್ದೆಯ ಸೆಕ್ಷನ್ 9 ರಲ್ಲೇ ಸ್ಪಷ್ಟವಾಗಿ ಹೇಳಲಾಗಿದೆ. ಯುಐಡಿಎಐ (UIDAI) ಕೂಡ ಆಗಸ್ಟ್ 22, 2023 ರ ತನ್ನ ಅಧಿಸೂಚನೆಯಲ್ಲಿ ಇದನ್ನು ಸ್ಪಷ್ಟಪಡಿಸಿದೆ. ಆದಾಗ್ಯೂ, ಶಾಲೆಗಳ ಪ್ರವೇಶಾತಿ, ಆಸ್ತಿ ಖರೀದಿ, ಜನನ ಪ್ರಮಾಣಪತ್ರ, ಪಡಿತರ ಚೀಟಿ, ಚಾಲನಾ ಪರವಾನಗಿ ಪಡೆಯಲು ಮತ್ತು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಆಧಾರ್ ಅನ್ನು ಬಳಸಲಾಗುತ್ತಿದೆ. ಇದರಿಂದಾಗಿ ನುಸುಳುಕೋರರು ಮತ್ತು ಅಕ್ರಮ ವಲಸಿಗರು ಸುಲಭವಾಗಿ ಭಾರತೀಯ ದಾಖಲೆಗಳನ್ನು ಪಡೆಯುತ್ತಿದ್ದಾರೆ” ಎಂದು ಅರ್ಜಿಯಲ್ಲಿ ಕಳವಳ ವ್ಯಕ್ತಪಡಿಸಲಾಗಿದೆ.

ಚುನಾವಣಾ ಪ್ರಕ್ರಿಯೆಯಲ್ಲಿ ಸದ್ಯ ಇರುವ ಮತದಾರರ ಪರಿಶೀಲನಾ ವ್ಯವಸ್ಥೆಯು ಅಪೂರ್ಣವಾಗಿದ್ದು, ಸೂಕ್ತ ದಾಖಲೆಗಳಿಲ್ಲದವರೂ ಮತದಾರರ ಪಟ್ಟಿಗೆ ಸೇರಲು ಇದು ಕಾರಣವಾಗಬಹುದು ಎಂದು ಅರ್ಜಿಯಲ್ಲಿ ಎಚ್ಚರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಡೀ ಪರಿಶೀಲನಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸುಧಾರಿಸಬೇಕು ಮತ್ತು ಈ ಸುಧಾರಣೆಗಳ ಮೇಲ್ವಿಚಾರಣೆಗಾಗಿ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಾಧೀಶರು, ಸೈಬರ್ ಭದ್ರತೆ ಹಾಗೂ ವಿಧಿವಿಜ್ಞಾನ (ಫೊರೆನ್ಸಿಕ್) ತಜ್ಞರನ್ನೊಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ರಚಿಸಬೇಕು ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now