ಮೈಸೂರು: ರಾಜ್ಯದಲ್ಲೆಡೆ ಮುಸ್ಲಿಂ ಸಮುದಾಯದವರಿಗೆ ಜಾತ್ರೆಗಳಲ್ಲಿ ವ್ಯಾಪಾರ ವಹಿವಾಟಿಗೆ ಬ್ರೇಕ್ ಹಾಕಲಾಗಿದೆ. ಈ ಸಂಬಂಧ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ ಇದೀಗ ಕೆಪಿಸಿಸಿ ವಕ್ತಾರ ಲಕ್ಷ್ಮಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಗುಲಗಳ ಬಳಿ ಮುಸ್ಲಿಂರ ವ್ಯಾಪಾರಕ್ಕೆ ನಿರ್ಬಂಧ ವಿಚಾರದಲ್ಲಿ ಮೈಸೂರಿನಲ್ಲಿ ಮಾತನಾಡಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ವಾಗ್ದಾಳಿ ನಡೆಸಿದ್ದಾರೆ. ಆರಗ ಜ್ಞಾನೇಂದ್ರ ಒಬ್ಬ ಮೂರ್ಖ ಗೃಹ ಸಚಿವ. ಇಂಥ ಬೇಜವಾಬ್ದಾರಿ ಮಂತ್ರಿಯನ್ನು ನಾನೆಂದು ನೋಡಿಲ್ಲ ಎಂದಿದ್ದಾರೆ.
ಇನ್ನು ಈ ರೀತಿ ಘಟನೆ ನಡೆದಾಗ ಮಂಗಳೂರು ಪೊಲೀಸರು ಏನು ಮಾಡುತ್ತಿದ್ದಾರೆ. ಬಿಜೆಪಿ ಏಜೆಂಟರಾಗಿ ಕೆಲಸ ಮಾಡುತ್ತಿದ್ದಾರಾ..? ಗೃಹ ಸಚಿವ ಆರಗ ಜ್ಞಾನೇಂದ್ರ ಏನು ಮಾಡುತ್ತಿದ್ದಾರೆಂದು ಪ್ರಶ್ನಿಸಿದ್ದಾರೆ.