Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಂಟ್ವಾಳದಲ್ಲಿ ಹರಿದ ಅಬ್ದುಲ್ ನೆತ್ತರು : ಈಗ ಮಂಗಳೂರಿನ ಪರಿಸ್ಥಿತಿ ಹೇಗಿದೆ..?

---Advertisement---

ಮಂಗಳೂರು; ಬೆಳ್ಳಂ ಬೆಳಗ್ಗೆಯೇ ಮಂಗಳೂರಿನ ಬಂಟ್ವಾಳದಲ್ಲಿ ತಲ್ವಾರ್ ಸದ್ದು ಮಾಡಿದೆ. ಅಬ್ದುಲ್ ರಹಿಮಾನ್ ಎಂಬಾತನ ಮೇಲೆ ದಾಳಿ ಮಾಡಲಾಗಿದೆ. ಬಂಟ್ವಾಳದ ಕುರಿಯಾಳ ಸಮೀಪದ ಕಾಂಬೋಡಿಯಾ ಇರಾಕೋಡಿಯಲ್ಲಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಅಬ್ದುಲ್ ರಹಿಮಾನ್ ಮೇಲೆ ದಾಳಿ ಮಾಡಿದ್ದಾರೆ. ಅಬ್ದುಲ್ ರಹಿಮಾನ್ ಪಿಕಪ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಏಕಾಏಕಿ ಅಬ್ದುಲ್ ಮೇಲೆ ದಾಳಿ ನಡೆಸಿದ್ದು, ಆತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಅವರ ಜೊತೆಗಿದ್ದ ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿವೆ.

ಮರಣೋತ್ತರ ಪರೀಕ್ಷೆಯ ಬಳಿಕ ಅಬ್ದುಲ್ ರಹಿಮಾನ್ ಮೃತದೇಹ ಮಸೀದಿ ತಲುಪಿದ್ದು, ಇಸ್ಲಾಂ ಸಂಪ್ರದಾಯದಂತೆ ಮಯ್ಯತ್ ಮಾಡಲಾಗುತ್ತದೆ. ಬಳಿಕ ಕೊತ್ತಮಜಲು ಗ್ರಾಮಕ್ಕೆ ಮೃತದೇಹವನ್ನ ಕೊಂಡೊಯ್ದು, ಅಂತ್ಯಸಂಸ್ಕಾರ ನಡೆಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದೆ. ನಿನ್ನೆಯಿಂದ ಜಾರಿಯಾಗಿದ್ದು, ಮೇ 30ರವರೆಗೂ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.

ಸದ್ಯ ಮಂಗಳೂರಿನ ಪರಿಸ್ಥಿತಿ ಹೇಗಿದೆ ಅನ್ನೋದನ್ನ ನೋಡೋದಾದ್ರೆ, ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗ್ರಾವಾಲ್ ಆದೇಶ ಹೊರಡಿಸಿದ್ದಾರೆ. ಇನ್ನು, ಇವತ್ತು ಮಂಗಳೂರಿಗೆ ಎಡಿಜಿಪಿ ಹಿತೇಂದ್ರ ಭೇಟಿ ನೀಡಲಿದ್ದು, ಆಯಕಟ್ಟಿನ ಸ್ಥಳಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಜೊತೆಗೆ ಅನುಮಾನಾಸ್ಪದ ಚಟುವಟಿಕೆ ಮೇಲೆ ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ. ರಹಿಮಾನ್ ಮೃತದೇಹದ ಮೆರವಣಿಗೆ ಆರಂಭವಾಗಿದ್ದು, ಯಾವುದೇ ಅಹಿತಕರ ಘಟನೆಗೆ ಆಸ್ಪದ ಕೊಡದಂತೆ ನೋಡಿಕೊಂಡಿದ್ದಾರೆ. ಇಡೀ ಮಗಳೂರನ್ನ ಪೊಲೀಸರು ಸೂಕ್ಷ್ಮವಾಗಿ ಗಮನಿಸುತ್ತಾ ಇದ್ದಾರೆ. ಎಲ್ಲಿಯೂ ಏನು ಸಮಸ್ಯೆ ಆಗದಂತೆ ಎಚ್ಚರವಹಿಸಿದ್ದಾರೆ. ಮಂಗಳೂರಿನ ಕುತ್ತಾರ್ ನಿಂದ ಬಂಟ್ವಾಳದ ಮಸೀದಿಯ ತನಕ ಮೆರವಣಿಗೆಯನ್ನು ಮಾಡಲಾಗುತ್ತಿದೆ. ಬಳಿಕ ಅಂತ್ಯ ಸಂಸ್ಕಾರ ನೆರವೇರಿಸಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment