Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನೂತನ ಪಿಂಚಣಿ ಯೋಜನೆ ರದ್ದು ಮಾಡಿ : ಚಿತ್ರದುರ್ಗದಲ್ಲಿ ಮುಖ್ಯಮಂತ್ರಿಗೆ ನೌಕರರ ಮನವಿ

---Advertisement---

 

ಸುದ್ದಿಒನ್, ಚಿತ್ರದುರ್ಗ : ನೂತನ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆ (OPS) ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘದ ಸದಸ್ಯರು ಶುಕ್ರವಾರ ‌ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.

ಶುಕ್ರವಾರ ನಗರಕ್ಕೆ ಮುಖ್ಯಮಂತ್ರಿ  ಆಗಮಿಸಿದ್ದ ವೇಳೆ ಈ ಮನವಿಯನ್ನು ಸಲ್ಲಿಸಲಾಯಿತು.

ಕರ್ನಾಟಕ ರಾಜ್ಯದ ಸರ್ಕಾರಿ NPS ನೌಕರರಿಗೆ ಹಾಗೂ ನಿಗಮ ಮಂಡಳಿ ಅನುದಾನಿತ ನೌಕರರಿಗೆ 1.4.2006 ರಿಂದ ಜಾರಿ ಇರುವ ಅವೈಜ್ಞಾನಿಕವಾದ ಎನ್‌ಪಿಎಸ್ ಯೋಜನೆಯನ್ನು ಸರಕಾರ ರದ್ದು ಮಾಡಿ, ನಿಶ್ಚಿತ ಯೋಜನೆ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಕರ್ನಾಟಕ ರಾಜ್ಯದ ಸರ್ಕಾರಿ NPS ನೌಕರರಿಗೆ ಹಾಗೂ ನಿಗಮ ಮಂಡಳಿ ,ಅನುದಾನಿತ ನೌಕರರಿಗೆ ಮಾರಕವಾಗಿರುವ NPS ಯೋಜನೆ ರದ್ದುಗೊಳಿಸಿ ಹಳೆಯ ಪಿಂಚಣಿ ಜಾರಿಗೊಳಿಸುವ ಮೂಲಕ ನೌಕರರ ಹಾಗೂ ಕುಟುಂಬದ ಹಿತಕಾಪಡಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘದ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷ
ಡಾ.ಸ.ರಾ.ಲೇಪಾಕ್ಷ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಡಿ.ಕಲ್ಲೇಶ್, ಉಪಾಧ್ಯಕ್ಷರು, ರವಿ, ಕೆ.ಪಿ.ಟಿ.ಸಿ.ಎಲ್. ಜಿಲ್ಲಾಧ್ಯಕ್ಷರು, ಚಿತ್ರದುರ್ಗ ಹಾಗೂ ಇಕ್ಬಾಲ್ ಹಾಗೂ ನೌಕರರು ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment