Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಪ್ರಾಪ್ತೆಗೆ ಅಕ್ರಮ ಗರ್ಭಪಾತ ಪ್ರಕರಣ: ಆಸ್ಪತ್ರೆಗೆ ಅಧಿಕಾರಿಗಳ ದಾಳಿ, ದಾಖಲೆಗಳಲ್ಲಿ ಅಕ್ರಮ ಬಯಲು

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 11 : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಬಳಿಕ ಅಕ್ರಮವಾಗಿ ಗರ್ಭಪಾತ ಮಾಡಿಸಿದ ಗಂಭೀರ ಪ್ರಕರಣ ಬೆಳಕಿಗೆ ಬಂದಿದ್ದು, ತುಳಕು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.ಸರ್ಕಾರಿ ಶಾಲೆಯ ಶಿಕ್ಷಕ ಹೆಚ್.ಓ. ರಾಜಣ್ಣ ತನ್ನ ವಿದ್ಯಾರ್ಥಿನಿಯ ಮೇಲೆಯೇ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದ್ದು, ಇದರಿಂದ 16 ವರ್ಷದ ಬಾಲಕಿ ಗರ್ಭಿಣಿಯಾಗಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಘಟನೆ ಬಹಿರಂಗವಾಗುವ ಭಯದಿಂದ ಶಿಕ್ಷಕ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿ, ಚಳ್ಳಕೆರೆಯ ಲಕ್ಷ್ಮೀ ಶ್ರೀನಿವಾಸ ನರ್ಸಿಂಗ್ ಹೋಮ್‌ನ ವೈದ್ಯೆ ಶಂಕರಲಕ್ಷ್ಮಿಯನ್ನು ಸಂಪರ್ಕಿಸಿ ಅಕ್ರಮವಾಗಿ ಗರ್ಭಪಾತ ಮಾಡಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಪ್ರಕರಣ ದಾಖಲಾಗುತ್ತಿದ್ದಂತೆಯೇ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರೇಣುಪ್ರಸಾದ್, ತಹಶೀಲ್ದಾರ್ ರೇಹಾನ್ ಪಾಷಾ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ತಂಡ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.ಪರಿಶೀಲನೆ ವೇಳೆ ವೈದ್ಯೆ ಗೈರಾಗಿದ್ದರೂ ಆಸ್ಪತ್ರೆಯ ದಾಖಲೆಗಳನ್ನು ಪರಿಶೀಲಿಸಿದ ಅಧಿಕಾರಿಗಳಿಗೆ ಫೆಬ್ರವರಿ 28ರಂದು ಬಾಲಕಿಯನ್ನು ದಾಖಲಿಸಿ, ಮಾರ್ಚ್ 1ರಂದು ಗರ್ಭಪಾತ ಮಾಡಿರುವುದು ದೃಢಪಟ್ಟಿದೆ.

ಇನ್ನೂ, ವಿವಾಹವಾಗದ ಅಪ್ರಾಪ್ತೆಗೆ ದಾಖಲೆಗಳಲ್ಲಿ ‘ಬೊಮ್ಮಯ್ಯ’ ಎಂಬ ಗಂಡನ ಹೆಸರನ್ನು ಸುಳ್ಳಾಗಿ ನಮೂದಿಸಿರುವುದು ಹಾಗೂ ಸಂಬಂಧಿತ ದಾಖಲೆಗಳನ್ನು ನಾಶಪಡಿಸಿರುವುದು ಕೂಡ ಪತ್ತೆಯಾಗಿದೆ.ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ಮುಂದುವರಿದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರೇಣುಪ್ರಸಾದ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...