Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ :  ಬಸವಮೂರ್ತಿ ಮಾದಾರ ಚನ್ನಯ್ಯಸ್ವಾಮೀಜಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ : ಯಾವುದೇ ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಕ್ರೀಡಾ ಮನೋಭಾವನೆಯಿಂದ ಆಡಬೇಕೆಂದು ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಕಬಡ್ಡಿ ಪಟುಗಳಿಗೆ ತಿಳಿಸಿದರು.

ಚಿತ್ರದುರ್ಗ ಸ್ಪೋಟ್ರ್ಸ್ ಕ್ಲಬ್, ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇವರ ಸಂಯುಕ್ತಾಶ್ರಯದಲ್ಲಿ ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಶುಕ್ರವಾರದಿಂದ ಆರಂಭಗೊಂಡಿರುವ 22 ವರ್ಷದೊಳಗಿನ ರಾಜ್ಯ ಮಟ್ಟದ ಪುರುಷರ ಹೊನಲು ಬೆಳಕಿನ ಪ್ರೋ ಮಾದರಿಯ ಕಬಡ್ಡಿ ಪ್ರೀಮಿಯರ್ ಲೀಗ್ ಪಂದ್ಯಾವಳಿ ಉದ್ಗಾಟಿಸಿ ಮಾತನಾಡಿದರು.

ಚಿತ್ರದುರ್ಗ ಕ್ರೀಡೆಯಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಬೇಕಾದರೆ ಕ್ರೀಡೆಯ ಜೊತೆಗೆ ಕಲೆ, ಸಾಂಸ್ಕøತಿಕವಾಗಿ ವಿಜೃಂಭಿಸಬೇಕು. ಮುಂದಿನ ವರ್ಷ ರಾಷ್ಟ್ರಮಟ್ಟದ ಕಬಡ್ಡಿಯನ್ನು ಆಡಿಸುವ ಚಿಂತನೆಯಿದೆ ಎಂದು ಹೇಳಿದರು.

ಮಾಜಿ ಶಾಸಕ ಎಸ್.ಕೆ.ಬಸವರಾಜನ್, ಅಹೋಬಲ ಶೋರೂಂನ ಅರುಣ್‍ಕುಮಾರ್, ಅಂತರಾಷ್ಟ್ರೀಯ ಕಬಡ್ಡಿಪಟು ಅರ್ಜುನ ಪ್ರಶಸ್ತಿ ವಿಜೇತ ಬಿ.ಸಿ.ರಮೇಶ್, ಭೀಮಸಮುದ್ರದ ಮಲ್ಲಿಕಾರ್ಜುನ್, ಹಿರಿಯ ಪತ್ರಕರ್ತ ಟಿ.ಕೆ.ಬಸವರಾಜ್, ಪಂದ್ಯಾವಳಿಯ ಸಂಘಟಕ ಪಿ.ಸಿ.ಮುರುಗೇಶ್, ನಾಗಭೂಷಣ್, ನಾಯ್ಡು ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!