ಉತ್ತರ ಕನ್ನಡ: ಕಾರು ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಡಿಕ್ಕ ಸಂಭವಿಸಿದ ಪರಿಣಾಮ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಬಳಿ ನಡೆದಿದೆ. ಈ ಭೀಕರ ಅಪಘಾತದಲ್ಲಿ ತಮಿಳುನಾಡಿನ ಮೂವರು ಸಾವಿಗೀಡಾಗಿದ್ದಾರೆ.
ಒಬ್ಬ ವ್ಯಕ್ತಿಗೆ ಗಂಭೀರ ಗಾಯವಾಗಿದ್ದು, ಆತನನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತಪಟ್ಟವರ ಹೆಸರು ಪತ್ತೆ ಇನ್ನು ಆಗಿಲ್ಲ. ಘಟನಾ ಸ್ಥಳಕ್ಕೆ ಅಂಕೋಲಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.