ಬೆಳಗಾವಿ: ಸ್ವಿಫ್ಟ್ ಡಿಸೈನರ್ ಕಾರಿಗೆ ಸಿಮೆಂಟ್ ತುಂಬಿದ ಲಾರಿ ಡಿಕ್ಕಿಯಾದ ಪರಿಣಾಮ ಚಾಲಕ ಸೇರಿ ಎಎಸ್ಐ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಡಚಿ ಪೊಲೀಸ್ ಠಾಣೆಯ ಎಎಸ್‌ಐ ವೈ.ಎಂ.ಹಲಕಿಯವರ ಪತ್ನಿ, ಪುತ್ರಿ ಹಾಗೂ ಚಾಲಕ, ಅಜ್ಜಿ ಸೇರಿ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ. ಬೆಳಗಾವಿ ಎಸ್‌ಪಿ ಡಾ.ಸಂಜೀವ್ ಪಾಟೀಲ್, ಮುರಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಲಾರಿ ಡಿಕ್ಕಿಯಾದ ರಭಸಕ್ಕೆ ಸ್ವಿಫ್ಟ್ ಡಿಸೈರ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಎಎಸ್ಐ ಕುಟುಂಬಸ್ಥರು ಯರಗಟ್ಟಿಗೆ ತೆರಳುತ್ತಿದ್ದರು. ಈ ವೇಳೆ ಈ ದುರ್ಘಟನೆ ನಡೆದಿದೆ. ಇನ್ನು ಬೈಕ್ ನಲ್ಲಿ ಬರುತ್ತಿದ್ದ ಅಜ್ಜಿಯೊಬ್ಬರು ಮೃತರಾಗಿದ್ದಾರೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.