Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ आध्यात्मिक अन्य

---Advertisement---

ಚಿತ್ರದುರ್ಗದಲ್ಲಿ ಬೆಳ್ಳಂಬೆಳಿಗ್ಗೆ ಬೀಕರ ಅಪಘಾತ : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ವರು ಸ್ಥಳದಲ್ಲೇ ಸಾವು

---Advertisement---

ಸುದ್ದಿಒನ್, ಚಿತ್ರದುರ್ಗ, (ಜೂ.08) : ರಾಷ್ಟ್ರೀಯ ಹೆದ್ದಾರಿ 48 (13) ಮಲ್ಲಾಪುರ ಬಳಿ ಮತ್ತು  ಜಾನುಕೊಂಡ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ನಡೆದಿದೆ ಎನ್ನಲಾದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಒಟ್ಟು ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಗುರುವಾರ ಬೆಳಗಿನ ಜಾವದಲ್ಲಿ ನಡೆದಿದೆ.

ಮಲ್ಲಾಪುರ ಬಳಿ ನಡೆದ ಅಪಘಾತ :

ಅಹಮದಾಬಾದ್‌ನಿಂದ ತಮಿಳುನಾಡಿಗೆ ಮೃತದೇಹವನ್ನು ಹೊತ್ತೊಯ್ಯುತ್ತಿದ್ದ ಆಂಬುಲೆನ್ಸ್ ವಾಹನವು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನು ಕನಕಮಣಿ 72 ವರ್ಷ, ಆಕಾಶ್ 17 ವರ್ಷ ಮತ್ತು ಆಂಬ್ಯುಲೆನ್ಸ್ ಚಾಲಕ 45 ವರ್ಷ ಎಂದು ಗುರುತಿಸಲಾಗಿದೆ. ಅಲ್ಲದೇ ಜ್ಞಾನಶೇಖರ 51 ವರ್ಷ ಮತ್ತು ಮೌಳಿ ರಾಜನ್ 40 ವರ್ಷ ಇವರು ಗಾಯಗೊಂಡಿದ್ದು,ಅವರನ್ನು ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಾನುಕೊಂಡ ಬಳಿ ನಡೆದ ಅಪಘಾತ :

ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆಗೆ ಹೋಗುತ್ತಿದ್ದ ಮಾರುತಿ ಓಮ್ನಿ ವಾಹನ ಮತ್ತು ಚಿತ್ರದುರ್ಗದ ಕಡೆ ಬರುತ್ತಿದ್ದ ಬಸ್ ಮುಖಾಮುಖಿ ಡಿಕ್ಕಿಯಾಗಿ ಓಮ್ನಿ ಯಲ್ಲಿದ್ದ ವಾಹನ ಚಾಲಕ ಹಿರಿಯೂರಿನ ಅರುಣ್ ಕುಮಾರ್ 24 ವರ್ಷ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಓಮ್ನಿ ವಾಹನ ಸಂಪೂರ್ಣ ಜಖಂಗೊಂಡಿದೆ.

ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ.

Join WhatsApp

Join Now

Join Telegram

Join Now

Leave a Comment