ತುಮಕೂರು: ಇಂದು ಶಿರಾದಲ್ಲಿ ಲಾರಿ ಮತ್ತು ಟ್ಯಾಕ್ಸಿ ನಡುವೆ ಮುಖಾ ಮುಖಿ ಡಿಕ್ಕಿಯಾಗಿ ಸ್ಥಳದಲ್ಲಿಯೇ ಒಂಭತ್ತು ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆಗೆ ಬೆಳಗ್ಗೆಯೇ ಪ್ರಧಾನಿ ಮೋದಿ ಸಂತಾಪ ಸೂಚಿಸಿ, ತಲಾ ಎರಡು ಲಕ್ಷ ಪರಿಹಾರವನ್ನು ಘೋಷಿಸಿದ್ದರು. ಇದೀಗ ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ಪರಿಹಾರ ಘೋಷಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಬೊಮ್ಮಾಯಿ, “ದುಡಿಮೆಗಾಗಿ ಬಂದ ಕೂಲಿ ಕಾರ್ಮಿಕರು ತುಮಕೂರಿನ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅಸುನೀಗಿದ್ದು ನಿಜಕ್ಕೂ ದುರ್ದೈವದ ಸಂಗತಿಯಾಗಿದೆ. ಮೃತರ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿಗಳು ಪರಿಹಾರ ಘೋಷಿಸಿದ್ದು ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.
ರಾಜ್ಯ ಸರ್ಕಾರದ ವತಿಯಿಂದ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಹಾಗೂ ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಹಾಗೂ ಈ ಘಟನೆಯ ಸಮಗ್ರ ತನಿಖೆ ನಡೆಸಿ, ವರದಿ ಸಲ್ಲಿಸಲು ತುಮಕೂರಿನ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ಟ್ವೀಟ್ ಮಾಡಿದ್ದಾರೆ.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…