Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಐಮಂಗಲ ಬಳಿ ಅಪಘಾತ : 25 ಮಂದಿಗೆ ಗಾಯ  

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಸೆ. 28 : ‌ಐಮಂಗಲದ ಉಪಾಧ್ಯ ಹೋಟೆಲ್ ಬಳಿ ಸರ್ಕಾರಿ ಬಸ್ ಮತ್ತು ತಮಿಳುನಾಡಿನ ಲಾರಿ ನಡುವೆ ಬೀಕರ ಅಪಘಾತ ನಡೆದು ಇಪ್ಪತ್ತೈದಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಡೆದಿದೆ.

ಭಾನುವಾರ ಬೆಳಗಿನ ಜಾವ 2.45 ರ ವೇಳೆ ಹಿರಿಯೂರು ತಾಲ್ಲೂಕಿನ ಐಮಂಗಲದ ಉಪಾಧ್ಯ ಹೋಟೆಲ್ ಬಳಿ ಘಟನೆ ನಡೆದಿದ್ದು ಇಪ್ಪತ್ತೈದಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು ಗಾಯಾಳುಗಳನ್ನ ಹಿರಿಯೂರು ಹಾಗೂ ಚಿತ್ರದುರ್ಗದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿದೆ.

ಸರ್ಕಾರಿ ಬಸ್ಸು ಬೀಳಿಗಿಯಿಂದ ಬೆಂಗಳೂರಿಗೆ ಹೂರಟ್ಟಿದ್ದು, ಐಮಂಗಲದ ಉಪಾಧ್ಯ ಹೋಟೆಲ್ ಬಳಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಇದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬಸ್ಸುನಲ್ಲಿದ್ದ ಚಾಲಕ ಮತ್ತು ನಿರ್ವಾಹಕ ಸೇರಿದಂತೆ 45 ಜನರಲ್ಲಿ ಸುಮಾರು 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಚಿತ್ರದುರ್ಗದ ಸಂಸದರಾದ ಗೋವಿಂದ ಕಾರಜೋಳ, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕೆ.ಟಿ.ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ಮುಖಂಡರು ಇಂದು ಸರ್ಕಾರಿ ಆಸ್ಪತ್ರೆಗೆ ಭೇಟಿ ಗಾಯಾಳುಗಳ ಯೋಗ ಕ್ಷೇಮವನ್ನು ವಿಚಾರ ಮಾಡಿದರು.

ಈ ಸಮಯದಲ್ಲಿ ಗಾಯಾಗಳು ಅಫಘಾತದಲ್ಲಿ ತಮಗೆ ಅದ ನೋವನ್ನು ಸಂಸದರಿಗೆ ಮಾಜಿ ಶಾಸಕರಿಗೆ ತಿಳಿಸಿದರು. ಸಂಸದರು ಎಲ್ಲಾ ಗಾಯಾಳುಗಳನ್ನು ಭೇಟಿ ಮಾಡಿ ಮಾತನಾಡಿಸಿ ಅವರಿಗೆ ಸ್ವಾಂತಾನವನ್ನು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಆಸ್ಪತ್ರೆಯ ವೈದ್ಯರುಗಳಿಗೆ ಗಾಯಾಳುಗಳನ್ನು ಸರಿಯಾದ ರೀತಿಯಲ್ಲಿ ನೋಡಿಕೊಳ್ಳಿ ಉತ್ತಮವಾದ ಚಿಕಿತ್ಸೆಯನ್ನು ನೀಡಿ, ಅದೇ ರೀತಿ ಉತ್ತಮವಾದ ಔಷಧಿಗಳನ್ನು ಕೂಡಿ ಇವರು ನಮ್ಮ ಊರಿನವರು ಕೆಲಸಕ್ಕಾಗಿ ಬೆಂಗಳೂರಿಗೆ ಹೋಗುತ್ತಿದ್ದರು ದಾರಿ ಮಧ್ಯದಲ್ಲಿ ಅಪಘಾತವಾಗಿದೆ, ಇವರನ್ನು ಸರಿಯಾಗಿ ನೋಡಿಕೊಳ್ಳಿ ಎಂದು ವ್ಯದ್ಯರಿಗೆ ಸಂಸದರು ಸೂಚನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಖಂಜಾಚಿ ಮಾಧುರಿ ಗೀರಿಶ್, ಮುಖಂಡರಾದ ಡಾ.ಸಿದ್ದಾರ್ಥ ಗುಡಾರ್ಪಿ ಮಾಜಿ ಅಧ್ಯಕ್ಷರಾದ ಎ.ಮುರಳಿ, ನಗರಸಭಾ ಸದಸ್ಯರಾದ ಸುರೇಶ್, ಶ್ರೀನಿವಾಸ್ ಮಾಜಿ ಸದಸ್ಯರಾದ ರವಿಶಂಕರ್, ನಗರಾಧ್ಯಕ್ಷರಾದ ಲೋಕೇಶ್, ಗ್ರಾಮಾಂತರ ಅಧ್ಯಕ್ಷರಾದ ಕೆ.ನಾಗರಾಜ್ ಉಪ್ಪೇರಿಗೆನಹಳ್ಳಿ, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ, ಛಲವಾದಿ ತಿಪ್ಪೇಸ್ವಾಮಿ, ಸೇರಿದಂತೆ ಇತರರು ಉಪಸ್ಥಿತರಿದ್ದರು

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...