Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಂತಾರ-1 ಶೂಟಿಂಗ್ ಮುಗಿಸಿ ಬರುವಾಗ ಅಪಘಾತ : ಹಲವರಿಗೆ ಗಂಭೀರ ಗಾಯ..!

---Advertisement---

 

 

ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ ಸಿನಿಮಾ ವರ್ಲ್ಡ್ ವೈಡ್ ಹೆಸರು ಮಾಡಿತ್ತು. ಆ ಸಕ್ಸಸ್ ನಡುವೆಯೇ ಪ್ರೀಕ್ವೇಲ್ ಘೋಷಣೆ ಮಾಡಿದ್ದರು. 2025ಕ್ಕೆ ಅನೌನ್ಸ್ ಎಂಬುದನ್ನು ಹೊಂಬಾಳೆ ಈಗಾಗಲೇ ಘೋಷಣೆ ಮಾಡಿದೆ. ಕಾಂತಾರ-1 ಸಿನಿಮಾದ ಶೂಟಿಂಗ್ ಕೂಡ ನಡೆಯುತ್ತಿದೆ. ಶೂಟಿಂಗ್ ಆರಂಭಕ್ಕೂ ಮುನ್ನವೇ ನಟ ರಿಷಬ್ ಶೆಟ್ಟಿ ದೈವದ ಅನುಮತಿಯನ್ನು ಕೇಳಿದ್ದರು. ಇದೀಗ ಅದ್ಯಾಕೋ ಒಂದೊಂದೇ ಸಮಸ್ಯೆಗಳು ಸಿನಿಮಾಗೆ ಕಾಡುತ್ತಿವೆ.

ಕಾಂತಾರ-1 ಸಿನಿಮಾದ ಶೂಟಿಂಗ್ ಮುಗಿಸಿ ಜೂನಿಯರ್ ಆರ್ಟಿಸ್ಟ್ ಗಳನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಪಲ್ಟಿ ಹೊಡೆದಿದೆ. ಈ ಘಟನೆಯಲ್ಲಿ ಆರು ಮಂದಿಗೆ ಗಂಭೀರ ಗಾಯವಾಗಿದೆ. ಹತ್ತಿರದ ಆಸ್ಪತ್ರೆಯಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಾಂತಾರ-1 ಸಿನಿಮಾ ಶೂಟಿಂಗ್ ಕೊಲ್ಲೂರು ಸುತ್ತಮುತ್ತ ನಡೆಯುತ್ತಿತ್ತು. ಜೂನಿಯರ್ ಆರ್ಟಿಸ್ಟ್ ಗಳಿದ್ದ ಮಿನಿ ಬಸ್ ಜಡ್ಕಳ್ ಬಳಿ ಪಲ್ಟಿಯಾಗಿದೆ.

ಕಾಂತಾರ-1 ಸಿನಿಮಾದ ಚಿತ್ರೀಕರಣ ಕರಾವಳಿಯ ಹಲವು ಭಾಗಗಳಲ್ಲಿ ನಡೆಯುತ್ತಿದೆ. ಈ ಸಿನಿಮಾಗೆ ಸಾಕಷ್ಟು ಜೂನಿಯರ್ ಆರ್ಟಿಸ್ಟ್ ಗಳನ್ನ ಕರೆತರಲಾಗಿದೆ. ಕೆಲವು ದಿನಗಳ ಹಿಂದಷ್ಟೇ ಈ ಸಿನಿಮಾದ ಜೂನಿಯರ್ ಆರ್ಟಿಸ್ಟ್ ಗಳು ಸರಿಯಾದ ಸೌಲಭ್ಯ ನೀಡುತ್ತಿಲ್ಲವೆಂದು ಕೋಪಗೊಂಡಿದ್ದರು. ಇದು ಅಷ್ಟು ದೊಡ್ಡ ಸಂಸ್ಥೆ ಹೊಂಬಾಳೆಗೆ ಮುಜುಗರ ತಂದಿತ್ತು. ಇದರ ಬೆನ್ನಲ್ಲೇ ಹೊಂಬಾಳೆ ಸ್ಪಷ್ಟನೆಯನ್ನು ನೀಡಿತ್ತು‌. ಇದು ಜೂನಿಯರ್ ಆರ್ಟಿಸ್ಟ್ ಗಳನ್ನು ಕಳುಹಿಸಿಕೊಡುವ ತಂಡದಿಂದ ಆಗಿರುವ ತಪ್ಪು ಎಂದು ತಿಳಿಸಿದ್ದರು. ಇದೀಗ ಜೂನಿಯರ್ ಆರ್ಟಿಸ್ಟ್ ಗಳಿದ್ದ ಮಿನಿ ಬಸ್ ಅಪಘಾತಕ್ಕೊಳಗಾಗಿದೆ. ಒಂದಷ್ಟು ಜನ ಚಿಕಿತ್ಸೆ ಕೂಡ ಪಡೆಯುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment