Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯ ಸರ್ಕಾರದ ಮೇಲೆ SC/ST ಅನುದಾನ ಬಳಕೆ ಆರೋಪ : ಮುತ್ತಿಗೆಗೆ ಬಿಜೆಪಿ ಸಿದ್ಧತೆ..!

---Advertisement---

 

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ತಾವೂ ಭರವಸೆ ನೀಡಿದ್ದ ಗ್ಯಾರಂಟಿಗಳನ್ನೆಲ್ಲಾ ಈಡೇರಿಸುತ್ತಿದೆ. ಆದರೆ ಅದಕ್ಕೆ ಕೋಟ್ಯಾಂತರ ರೂಪಾಯಿ ಹಣವಂತು ಖರ್ಚು ಆಗಿದೆ. ಈ ಹಣವನ್ನೆಲ್ಲಾ SC/ST ಸಮುದಾಯಕ್ಕೆಂದು ನೀಡಬೇಕಿದ್ದ ಅನುದಾನದಿಂದ ಬಳಕೆ ಮಾಡಿಕೊಳ್ಳಲಾಗಿದೆ ಎಂದು ಬಿಜೆಪಿಯ ಮಾಜಿ ಸಚಿವ ಗೋವಿಂದ ಕಾರಜೋಳ ಆರೋಪಿಸಿದ್ದಾರೆ‌.

SC, ST ಸಮುದಾಯಕ್ಕೆ ಮೀಸಲಾದ ಅನುದಾನದಲ್ಲಿ ಸುಮಾರು 11,144 ಕೋಟಿ ಹಣವನ್ನು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡಿದೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಅವರು ಆರೋಪಿಸಿದ ಬೆನ್ನಲ್ಲೇ ಮೂರು ಹಂತದಲ್ಲಿ ಹೋರಾಟ ಮಾಡಲು ಬಿಜೆಪಿ ನಾಯಕರು ಸಜ್ಜಾಗಿದ್ದಾರೆ. SC/ST ಅನುದಾನ ಬಳಕೆ ಮಾಡದಿದ್ದರೆ ಮೂರು ಹಂತದಲ್ಲಿ ಹೋರಾಟ ಮಾಡಿ, ಪಾದಯಾತ್ರೆ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸೆಪ್ಟೆಂಬರ್ 25ರಿಂದ ಅಕ್ಟೋಬರ್ 10ರ ತನಕ ಮೊದಲ ಹಂತದ ಜನಾಂದೋಲನ, ಅಕ್ಟೋಬರ್ 11 ರಿಂದ 25ರ ತನಕ ಎರಡನೇ ಹಂತದಲ್ಲಿ ಜಿಲ್ಲೆಗಳಲ್ಲಿ ಸಚಿವರು, ಶಾಸಕರಿಗೆ ಮುತ್ತಿಗೆ, ನವೆಂಬರ್ 2ನೇ ವಾರದಲ್ಲಿ ಮೂರನೇ ಹಂತದಲ್ಲಿ ಹರಿಹರದ ಬಿ ಕೃಷ್ಣಪ್ಪ ಅವರ ಸಮಾಧಿಯಿಂದ ಪಾದಯಾತ್ರೆ ಮೂಲಕ ವಿಧಾನಸೌಧಕ್ಕೆ ಮುತ್ತುಗೆ ಹಾಕಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...