Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಮನೆಗಳ್ಳತನ ಮಾಡಿದ್ದ ಆರೋಪಿ ಅರೆಸ್ಟ್ : 3.64 ರೂ. ಲಕ್ಷ ಮೌಲ್ಯದ ನಗದು, ಐಫೋನ್ ವಶ

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 17 : ನಗರದ ಕೆ.ಎಸ್.ಆರ್.ಟಿ.ಸಿ ಬಡಾವಣೆಯ ಮನೆಯೊಂದರಲ್ಲಿ ಲಕ್ಷಾಂತರ ರೂಪಾಯಿ ನಗದು ಕಳವು ಮಾಡಿದ್ದ ಆರೋಪಿಯನ್ನು ಚಿತ್ರದುರ್ಗ ಬಡಾವಣೆ ಠಾಣೆ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ.

ನಗರದ ಕಣುಮಪ್ಪ ಲೇಔಟ್ ನಿವಾಸಿ ಸೈಯದ್ ಬಾಷ ಬಂಧಿತ ಆರೋಪಿಯಾಗಿದ್ದು, ಆತನಿಂದ 2 ಲಕ್ಷ ರೂ. ನಗದು ಹಾಗೂ ಕಳವು ಮಾಡಿದ ಹಣದಲ್ಲಿ ಖರೀದಿಸಿದ್ದ 1,64,000 ರೂ. ಮೌಲ್ಯದ ಐಫೋನ್ 18 ಪ್ರೊ ಮೊಬೈಲ್ ಸೇರಿದಂತೆ ಒಟ್ಟು 3,64,000 ಮೌಲ್ಯದ ಸ್ವತ್ತನ್ನು ವಶಪಡಿಸಿಕೊಳ್ಳಲಾಗಿದೆ.

ಕೆ.ಎಸ್.ಆರ್.ಟಿ.ಸಿ ಬಡಾವಣೆಯ 6ನೇ ಕ್ರಾಸ್ನಲ್ಲಿರುವ ‘ಹನಿ’ ನಿಲಯದ ನಿವಾಸಿ ಯತೀಶ್ ಮತ್ತು ಅವರ ಪತ್ನಿ ಅಕ್ಟೋಬರ್ 14ರಂದು ಮನೆಯಲ್ಲಿ ಇಲ್ಲದಿದ್ದ ವೇಳೆ ಒಳನುಗ್ಗಿದ ಕಳ್ಳ, ಬೀರುವಿನಲ್ಲಿದ್ದ 4,98,000 ರೂ. ನಗದನ್ನು ದೋಚಿ ಪರಾರಿಯಾಗಿದ್ದನು. ಈ ಸಂಬಂಧ ಯತೀಶ್ ನೀಡಿದ ದೂರಿನ ಮೇರೆಗೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಬಿ.ಎನ್.ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಡಾ. ಶಿವಕುಮಾರ್ ಆರ್., ಡಿವೈಎಸ್ಪಿ ಅರುಣ್ ಕುಮಾರ್ ನಾಗೇಗೌಡ ಹಾಗೂ ವೃತ್ತ ನಿರೀಕ್ಷಕ ಮಂಜುನಾಥ್ ಡಿ. ಅವರ ಮಾರ್ಗದರ್ಶನದಲ್ಲಿ ಪಿಎಸ್ಐ ಸಚಿನ್ ಪಟೇಲ್ ಎನ್.ಜಿ. ನೇತೃತ್ವದ ವಿಶೇಷ ತಂಡವನ್ನು ರಚಿಸಿದ್ದರು. ಈ ತಂಡವು ತೀವ್ರ ಕಾರ್ಯಾಚರಣೆ ನಡೆಸಿ ಆರೋಪಿ ಸೈಯದ್ ಬಾಷಾನನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದೆ. ತ್ವರಿತ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಶ್ಲಾಘಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now