Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಪ್ರಚೋದನಕಾರಿ ಭಾಷಣ ಮಾಡಿದ ಆರೋಪ : ಈಶ್ವರಪ್ಪ ಮೇಲೆ ಸುಮೋಟೋ ಕೇಸ್

---Advertisement---

 

ಶಿವಮೊಗ್ಗ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ವಿರುದ್ಧ ಕೇಸ್ ದಾಖಲಾಗಿದೆ. ಜಯನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರಿಂದಾನೇ ಕೇಸ್ ದಾಖಲಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎನ್ನಲಾಗಿದೆ.

ಶಿವಮೊಗ್ಗದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿಯ ವಿರುದ್ಧ ನಿನ್ನೆ ನಡೆದ ಪ್ರತಿಭಟನಾ ಸಭೆಯಲ್ಲಿ ಆಡಿದ ಮಾತಿಗೆ ಕೇಸ್ ದಾಖಲಾಗಿದೆ. ‘ಹಿಂದೂ ಕಾರ್ಯಕರ್ತ ಹರ್ಷನ ಕೊಲೆಯ ಬಳಿಕ, ಹಿಂದೂಗಳು ಮುಸ್ಲಿಮರನ್ನು ಮಾರಿಹಬ್ಬದಲ್ಲಿ ಕುರಿಗಳನ್ನು ಕೊಚ್ಚಿದ ಹಾಗೆ ಕೊಚ್ಚಬಹುದಿತ್ತು. ಆದರೆ ಹಿಂದೂ ಸಮಾಜ ಆ ರೀತಿ ಪ್ರತಿಕ್ರಿಯಿಸದೆ ಶಾಂತ ರೀತಿಯಲ್ಲಿ ಪ್ರತಿಕ್ರಿಯಿಸಿದೆ ಎಂದು ಈಶ್ವರಪ್ಪ ಭಾಷಣದಲ್ಲಿ ಹೇಳಿದ್ದರು.

ಅಲ್ಲದೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಹೆಸರನ್ನು ತಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಮಗನನ್ನು, ಡಿಕೆ ಶಿವಕುಮಾರ್ ಅವರ ಸಹೋದರನನ್ನು ಮುಸ್ಲಿಂ ಗೂಂಡಾಗಳು ಕೊಚ್ಚಿ ಹಾಕಿದ್ದರೆ ಏನು ಅನ್ನಿಸ್ತಾ ಇತ್ತು ಎಂದು ಭಾಷಣ ಮಾಡಿದ್ದಾರೆ.. ಈ ಭಾಷಣ ಪ್ರಚೋದನಕಾರಿಯಾಗಿದ್ದರಿಂದ ಜಯನಗರ ಪೊಲೀಸರು ಸುಮೋಟೋ ಕೇಸ್ ದಾಖಲಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment