ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ.25 : ಬಡ ರೋಗಿಯೋರ್ವರಿಂದ ಲಂಚ ಸ್ವೀಕರಿಸಿರುವ ಜಿಲ್ಲಾಸ್ಪತ್ರೆಯ ಡಾ.ಸಾಲಿಮಂಜಪ್ಪರವರನ್ನು ಸೇವೆಯಿಂದ ಅಮಾನತ್ತುಗೊಳಿಸುವಂತೆ ಕರ್ನಾಟಕ ಯುವ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿ ನಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ರೋಗಿಯೊಬ್ಬರಿಂದ ಡಾ.ಸಾಲಿಮಂಜಪ್ಪ ಲಂಚ ಸ್ವೀಕರಿಸುತ್ತಿರುವ ವೀಡಿಯೋ ವೈರಲ್ ಆಗಿದ್ದು, ತಕ್ಷಣವೇ ಸೇವೆಯಿಂದ ಅಮಾನತ್ತುಗೊಳಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾನಿರತರು ಆಗ್ರಹಿಸಿದರು.
ಕರ್ನಾಟಕ ಯುವ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಎಂ.ಎಸ್.ಸುನೀಲ್, ಜಿಲ್ಲಾಧ್ಯಕ್ಷ ಮೋಹನ್‌ಕುಮಾರ್, ಮಧ್ಯ ಕರ್ನಾಟಕದ ಅಧ್ಯಕ್ಷ ಮುರಳಿಧರ್, ರಾಜ್ಯ ಕಾರ್ಯದರ್ಶಿ ಭಾನುಪ್ರಿಯ, ಪ್ರಧಾನ ಕಾರ್ಯದರ್ಶಿ ಮಂಜು, ಕಾರ್ಯಾಧ್ಯಕ್ಷ ಮಣಿಕಂಠ, ಜಿಲ್ಲೆಯ ಎಲ್ಲಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪ್ರತಿಭಟನೆಯಲ್ಲಿದ್ದರು.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






