ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ.25 : ಕರ್ತವ್ಯದ ವೇಳೆಯಲ್ಲಿಯೇ ಬಡ ರೋಗಿಯೊಬ್ಬರಿಂದ ಲಂಚ ಪಡೆದಿರುವ ಜಿಲ್ಲಾಸ್ಪತ್ರೆಯ ಡಾ.ಸಾಲಿಮಂಜಪ್ಪ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಪ್ರಜಾ ಕಲ್ಯಾಣ ಸಮಿತಿ ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಜಿಲ್ಲಾಸ್ಪತ್ರೆಗೆ ದಾಖಲಾಗಿರುವ ರೋಗಿಯೊಬ್ಬರಿಗೆ ಶಸ್ತ್ರ ಚಿಕಿತ್ಸೆ ಮಾಡಲು ಸಂಬಂಧಿಕರಿಂದ ನಾಲ್ಕು ಸಾವಿರ ರೂ.ಗಳ ಲಂಚ ಪಡೆಯುತ್ತಿರುವ ವೀಡಿಯೋ ವೈರಲ್ ಆಗಿದ್ದು, ಖಾಸಗಿ ಆರ್.ಎಸ್.ಹೆಲ್ತ್ ಕೇರ್ ಸೆಂಟರ್‌ನಲ್ಲಿಯೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಕ್ರಮವಾಗಿ ಇವರು ಗಳಿಸಿರುವ ಆಸ್ತಿಯ ತನಿಖೆ ನಡೆಸಬೇಕೆಂದು ಪ್ರಜಾ ಕಲ್ಯಾಣ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿಯನ್ನು ಆಗ್ರಹಿಸಿದರು.
ಪ್ರಜಾ ಕಲ್ಯಾಣ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷ ಹರೀಶ್ ಟಿ.ಎನ್. ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್, ಉಪಾಧ್ಯಕ್ಷ ಓಬಳೇಶ್ ಟಿ. ಸಂಘಟನಾ ಕಾರ್ಯದರ್ಶಿ ಪೂಜಾರಿ ಕರಿಯಪ್ಪ, ಸುಶೀಲಮ್ಮ, ವಿಜಯಲಕ್ಷ್ಮಿ ಇವರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್